ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಬಿಜೆಪಿ ಸರ್ಕಾರ ಮಂಗಳಸೂತ್ರ ಸೇರಿದಂತೆ ಧಾರ್ಮಿಕ, ಭಾವನಾತ್ಮಕ ಸಂಕೇತಗಳನ್ನು ಅಪಮಾನಿಸುತ್ತಿದೆ ಎಂದು ಕಾಂಗ್ರೆಸ್ ದೂರಿದೆ.
ಪರೀಕ್ಷೆಯಲ್ಲಿ ಮಾಂಗಲ್ಯ ಸರ, ಜನಿವಾರವನ್ನು ಧರಿಸಬಾರದು ಎಂದು ಪ್ರವೇಶಪತ್ರದಲ್ಲಿ ಉಲ್ಲೇಖಿಸಿರುವ ಮಾರ್ಗಸೂಚಿಯಲ್ಲಿ ಸೂಚನೆ ನೀಡಲಾಗಿದೆ. ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುವ ಬಿಜೆಪಿ, ಮೋದಿ ಸರ್ಕಾರ ಮಂಗಲಸೂತ್ರ, ಜನಿವಾರಕ್ಕೆ ಕೈ ಹಾಕಿದೆ! ಹಿಂದುತ್ವದ ಹೆಸರಿನಲ್ಲಿ ಮತ ಪಡೆದು ಅಧಿಕಾರಕ್ಕೆ ಬಂದು ಹಿಂದೂ ವಿರೋಧಿ ನೀತಿಗಳ ಮೂಲಕ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.