ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸರ್ಕಾರ ಶಿಕ್ಷಣಕ್ಕೆ ಬೆಲೆ ಕೊಡುತ್ತಿಲ್ಲ. ಕೇಂದ್ರದ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಶೇ.50ರಷ್ಟು ಹುದ್ದೆ ಖಾಲಿ ಇದ್ದರೂ ಭರ್ತಿ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಅವರು ಆರೋಪ ಮಾಡಿದ್ದಾರೆ.
ಹೈದರಾಬಾದ್ ಕರ್ನಾಟಕದಲ್ಲಿ 37 ಸಾವಿರ ಹುದ್ದೆ ಖಾಲಿಯಿವೆ. ದೇಶದ ನವೋದಯ ಶಾಲೆಗಳಲ್ಲಿ 40 ಸಾವಿರ, ಕೇಂದ್ರೀಯ ವಿದ್ಯಾಲಯದಲ್ಲಿ 7400, ಕೇಂದ್ರೀಯ ವಿವಿಗಳಲ್ಲಿ 5400 ಹುದ್ದೆ ಖಾಲಿ ಇದೆ. ದೇಶಾದ್ಯಂತ ಕೇಂದ್ರ ಸರ್ಕಾರದ ಅಧೀನದ 90 ಸಾವಿರ ಸರ್ಕಾರಿ ಶಾಲೆಗಳು ಮುಚ್ಚಿವೆ! ಅದರಲ್ಲಿ 50 ಸಾವಿರ ಶಾಲೆಗಳು ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಕ್ಕೆ ಸೇರಿವೆ ಎಂದು ಖರ್ಗೆ ತಿಳಿಸಿವೆ.
ಇದೇ ಅವಧಿಯಲ್ಲಿ ಶೇ. 40ರಷ್ಟು ಖಾಸಗಿ ಶಾಲೆಗಳು ಆರಂಭವಾಗಿವೆ. ಹಾಗಿದ್ದರೆ ಬಡವರ ಮಕ್ಕಳು ಎಲ್ಲಿ ಶಿಕ್ಷಣ ಪಡೆಯಬೇಕು? ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.