ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸರ್ಕಾರದ ಬಜೆಟ್ಅಲ್ಲಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರ ಮಾಡುವ ಅನ್ಯಾಯದ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಅವರು ದೂರಿದರು.
ಕಳೆದ ಮೂರು ವರ್ಷಗಳಿಂದಿನ ಕೇಂದ್ರ ಬಜೆಟ್ಅಲ್ಲಿ ಕೊಟ್ಟ ಮಾತನ್ನೇ ಕೇಂದ್ರ ಸರ್ಕಾರ ಉಳಿಸಿಕೊಂಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಘೋಷಿಸಿ, ಹಣ ಕೊಟ್ಟಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರೋಪಿಸಿದರು.

