ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸಭಾಪತಿ ಬಸವರಾಜ ಹೊರಟ್ಟಿಗೆ ಆಹ್ವಾನ

Screenshot
News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಈ ಬಾರಿ ಬೀದರದಲ್ಲಿ ಆಯೋಜಿಸಲಾಗುತ್ತಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದ ತಂಡ ಮನವಿ ಮಾಡಿತು.

ಸಂಘದ ಮನವಿಗೆ ಪ್ರತಿಕ್ರಿಯಿಸಿದ ಸಭಾಪತಿ ಹೊರಟ್ಟಿ ಅವರು, ಇದೇ 23ಕ್ಕೆ ಬೀದರ್ ಬರುತ್ತಿದ್ದೇನೆ. ಈ ಸಂದರ್ಭದಲ್ಲಿ ಸಮ್ಮೇಳನದ ಪೂರ್ವಭಾವಿಯಾಗಿ ಬೀದರ್ ಪತ್ರಿಕಾ ಭವನದಲ್ಲಿ ಫೆ.23ಕ್ಕೆ ಆಯೋಜಿಸುವ ಕಾರ್ಯಕ್ರಮದಲ್ಲಿಯೂ ಭಾಗವಹಿಸುವುದಾಗಿ ಭರವಸೆ ನೀಡಿದರು.

- Advertisement - 

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಿಂದೆ ಆಯೋಜಿಸಿದ್ದ ರಾಜ್ಯ ಸಮ್ಮೇಳನಕ್ಕೆ ಬಂದಿದ್ದೇನೆ. ಬೀದರ್
ಸಮ್ಮೇಳನಕ್ಕೂ ಬರುವೆ ಎಂದು ಹೇಳಿದರು.

ಕೆಯುಡಬ್ಲ್ಯೂಜೆ ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಬೀದರ್ ಜಿಲ್ಲಾ ಘಕದ ಜಿಲ್ಲಾಧ್ಯಕ್ಷ ಅನಂದ ದೇವಪ್ಪ, ಸಮಿತಿ ಸದಸ್ಯರಾದ ಅಪ್ಪಾರಾವ ಸೌದಿ, ಪತ್ರಕರ್ತ ನಂದಕುಮಾರ ಕರಂಜಿ, ಮಂಡ್ಯ ಜಿಲ್ಲಾ ಮಾಜಿ ಅಧ್ಯಕ್ಷ ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement - 

 

Share This Article
error: Content is protected !!
";