ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕೊಡಂಬಹಳ್ಳಿ, ಮಂಗಾಡಹಳ್ಳಿ, ಗರಕಹಳ್ಳಿ ಗ್ರಾಮದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ NDA ಅಭ್ಯರ್ಥಿ ನಿಖಿಲ್ ಕುಮಾರ ಸ್ವಾಮಿ ಅವರ ಪರವಾಗಿ ಬೃಹತ್ ಬಹಿರಂಗ ಪ್ರಚಾರ ಸಭೆಯನ್ನು ಏರ್ಪಡಿಸಲಾಗಿತ್ತು.
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿರುಪಾಕ್ಷಿಪುರ, ಮಂಗಡಹಳ್ಳಿ, ಬಲ್ಲಾಪಟ್ಟಣ, ಕೋಡಂಬಹಳ್ಳಿ, ಶ್ಯಾನಭೋಗನಹಳ್ಳಿ, ವನ್ನಿಗನಹಳ್ಳಿ, ವಡ್ಡರಹಳ್ಳಿ, ಕಾರೆಕೊಪ್ಪ, ಜೆ.ಬ್ಯಾಡರಹಳ್ಳಿ, ಮಾದೇಗೌಡನದೊಡ್ಡಿ, ವಾಲೆಮರದೊಡ್ಡಿ, ಜಗದಾಪುರ, ಕೊಲ್ಲಾಪುರ, ಸಿದ್ದಾಪುರ, ಗುವ್ವಾಪುರ, ಯಲಿಯೂರು ಗ್ರಾಮಗಳಲ್ಲಿ ಮಿಂಚಿನ ಸಂಚಾರ ಮಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಮತ ನೀಡಿ ಆಶೀರ್ವಾದಿಸುವಂತೆ ಕೈ ಮುಗಿದು ಕೋರಿಕೊಂಡರು.
ಈ ಸಂದರ್ಭದಲ್ಲಿ ಅಸಂಖ್ಯಾತ ಅಣ್ಣ ತಮ್ಮಂದಿರು, ಅಕ್ಕ ತಂಗಿಯರು, ತಾಯಂದಿರು, ವಿವಿಧ ಗ್ರಾಮಗಳ ಹಿರಿ ಕಿರಿಯರು, ಅಕ್ಕ ತಂಗಿಯರು, ಅಣ್ಣ ತಮ್ಮಂದಿರು ತೋರಿದ ಅಭಿಮಾನಕ್ಕೆ ನಾನು ಚಿರಋಣಿ ಆಗಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭಾವುಕರಾಗಿ ಧನ್ಯವಾದ ಅರ್ಪಿಸಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ಚನ್ನಪಟ್ಟಣ ನಗರದಲ್ಲಿ ಬೃಹತ್ ರೋಡ್ ಶೋ ನಡೆಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ NDA ನೇತೃತ್ವದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬಿರುಸಿನ ಮತಯಾಚನೆ ನಡೆಸಿದರು.
ಇದೇ ವೇಳೆ ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು, ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ನನ್ನ ಜನ್ಮದಿನದ ಶುಭಕೋರಿ ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಚಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಮಾಜಿ ಸಚಿವರಾದ ಸಾರಾ ಮಹೇಶ್, ಬಂಡೆಪ್ಪ ಕಾಂಶಂಪೂರ್,
ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷರಾದ ಧೀರಜ್ ಮುನಿರಾಜು, ಮಾಜಿ ಶಾಸಕರಾದ ಮಾಗಡಿ ಮಂಜುನಾಥ್, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಮಾಜಿ ಸಂಸದರಾದ ಮುನಿಸ್ವಾಮಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಹಾಗೂ ಮತದಾರರು ಉಪಸ್ಥಿತರಿದ್ದರು.