ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿಕ್ಕಬಳ್ಳಾಪುರದ ಚಿನ್ನಸಂದ್ರ ಗ್ರಾಮದಲ್ಲಿಂದು ಸುಪ್ರೀಂಕೋರ್ಟಿನ ನ್ಯಾಯಾಧೀಶರು ಹಾಗೂ ಒಡಿಶಾದ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಜಸ್ಟೀಸ್ವಿ. ಗೋಪಾಲಗೌಡರ 75ನೇ ಜನ್ಮದಿನಾಚರಣೆಯ ನಿಮಿತ್ತ ಹಮ್ಮಿಕೊಂಡಿದ್ದ
ʼಅಮೃತ ಮಹೋತ್ಸವʼದಲ್ಲಿ ಪಾಲ್ಗೊಂಡು, ಸಮಾಜಮುಖಿ ಕಾರ್ಯಕ್ರಮಗಳಿಗಾಗಿ ಅವರಿಂದ ಆರಂಭವಾದ ಚಾರಿಟೇಬಲ್ಟ್ರಸ್ಟ್ಅನ್ನು ಲೋಕಾರ್ಪಣೆಗೊಳಿಸಲಾಯಿತು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು.
ಈ ಸಂದರ್ಭದಲ್ಲಿ, ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ಕಲ್ಯಾಣ್, ಮಾಜಿ ಶಾಸಕ ಹಾಗೂ ಕರ್ನಾಟಕ ವಿಧಾನಸಭೆಯ ಉಪಸಭಾಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಕೋಲಾರ ಸಂಸದ ಎಂ. ಮಲ್ಲೇಶ್ಬಾಬು ಅವರು ಸೇರಿದಂತೆ ಪ್ರಮುಖ ಗಣ್ಯಮಾನ್ಯರು ಉಪಸ್ಥಿತರಿದ್ದರು.

