ಬ್ಯಾಕ್ ಲಾಗ್ ಹಾಗೂ ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯ ಪರಿಶೀಲಿಸಿ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆಯನ್ನು ಮಂಗಳವಾರ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ.10 ರಷ್ಟಿದ್ದುದು
, ಪ್ರಸ್ತುತ ಶೇ. 7ಕ್ಕೆ ಇಳಿದಿದೆ.

ಶಿಕ್ಷೆಯ ಪ್ರಮಾಣವನ್ನು ಶೇ.10 ಕ್ಕೆ ಹೆಚ್ಚಿಸುವಂತೆ ಸೂಚಿಸಲಾಗಿದ್ದು, ಈ ಬಗ್ಗೆ ಸರ್ಕಾರಿ ಪ್ರಾಸಿಕ್ಯೂಟರ್ ಗಳು ಹಾಗೂ ಪೊಲೀಸ್ ಇಲಾಖೆಯವರು ಪರಿಶೀಲನಾ ಸಭೆ ನಡೆಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಮೂರು ತಿಂಗಳಿಗೊಮ್ಮೆ ತಪ್ಪದೇ ಪ್ರಗತಿ ಪರಿಶೀಲನಾ ಸಭೆ ನಡೆಸಲು, ಈ ಬಗ್ಗೆ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದರು.

ಬ್ಯಾಕ್ ಲಾಗ್ ಹಾಗೂ ಬಡ್ತಿ ವಿಚಾರದಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸಭೆಯಲ್ಲಿ ಸಮಿತಿ ಸದಸ್ಯರು ಚರ್ಚಿಸಿದ್ದು, ಬ್ಯಾಕ್ ಲಾಗ್ ಹಾಗೂ ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪರಿಶೀಲನಾ ಸಭೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಇ.ಡಿ ಅವರು ನನ್ನ ಪತ್ನಿಗೆ ನೋಟೀಸ್ ಜಾರಿ ಮಾಡಿದ್ದು, ನ್ಯಾಯಾಲಯ ಅದಕ್ಕೆ ತಡೆಯಾಜ್ಞೆ ನೀಡಿದೆ. ಲೋಕಾಯುಕ್ತ ತನಿಖೆ ನಡೆಯುತ್ತಿದ್ದು, ಸಿಬಿಐ ಗೆ ಪ್ರಕರಣವನ್ನು ವಹಿಸುವ ಸಂಬಂಧ ನ್ಯಾಯಾಲಯದಲ್ಲಿ ವಾದ ನಡೆಯುತ್ತಿದೆ, ಈ ಹಂತದಲ್ಲಿ ಆತುರ ಮಾಡುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

ಇ.ಡಿ ನೋಟೀಸ್ ಮಾತ್ರ ರಾಜಕೀಯ ಪ್ರೇರಿತ‌ಅಲ್ಲಇಡೀ ಮುಡಾ ಪ್ರಕರಣವೇ ರಾಜಕೀಯ ಪ್ರೇರಿತವಾಗಿದೆ. ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐ ಗೆ ವಹಿಸಬಹುದೆಂಬ ಬಗ್ಗೆ ನನಗೆ ಆತಂಕವಿಲ್ಲ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ಇದೆ ಎಂದು ಸಿಎಂ ತಿಳಿಸಿದರು.

 

- Advertisement -  - Advertisement -  - Advertisement - 
Share This Article
error: Content is protected !!
";