ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ 9 ವರ್ಷದೊಳಗಿನ ಮಕ್ಕಳ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮತ್ತು ದೊಡ್ಡಬಳ್ಳಾಪುರ ನಗರದ ಕಲ್ಲುಪೇಟೆಯ ಅಚೀವರ್ಸ್ ಚೆಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿನಿ ಸನ್ವಿತ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.
ತಾಲೂಕಿನ ಸಾಸಲು ಹೋಬಳಿ ಪುಟ್ಟಲಿಂಗಯ್ಯನಪಾಳ್ಯ (ಲಿಂಗದವೀರನಹಳ್ಳಿ) ಗ್ರಾಮದ ವಾಣಿಜ್ಯತೆರಿಗೆ ಇಲಾಖೆಯ ಸಹಾಯಕ ಆಯುಕ್ತರಾದ ನರಸಿಂಹಮೂರ್ತಿ ಹಾಗೂ ದೊಡ್ಡಬಳ್ಳಾಪುರ ನಗರದ ಶಿಕ್ಷಣ ಸಂಯೋಜಕರಾದ ಜಯಶ್ರೀ ಕೆ.ಜೆ ದಂಪತಿಯ ಮಗಳಾದ ಸನ್ವಿತ ಎನ್ ಅವರು ಚೆಸ್ ಪಂದ್ಯಾವಳಿಯಲ್ಲಿ ಅಭೂತಪೂರ್ವ ಆಟವಾಡಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸನ್ವಿತಾ ಎನ್ ಅವರನ್ನು ಶಾಲಾ ಆಡಳಿತ ಮಂಡಳಿ ಹಾಗೂ ಗಣ್ಯರು ಅಭಿನಂದಿಸಿ ಪ್ರೋತ್ಸಾಹಿಸಿದ್ದಾರೆ.