ಚಂದ್ರವಳ್ಳಿ ನ್ಯೂಸ್, ಶ್ರೀನಗರ:
ಜಮ್ಮು-ಕಾಶ್ಮೀರದ ಹಲವು ಭಾಗಗಳಲ್ಲಿ ಪಾಕಿಸ್ತಾನ ದಾಳಿ ನಡೆಸಿದೆ. ಕೆಲವರು ಮನೆ ಬಿಟ್ಟು ಶಿಬಿರದಲ್ಲಿ ವಾಸಿಸುತ್ತಿದ್ದಾರೆ.
ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತ್ರಸ್ತರನ್ನು ಭೇಟಿಯಾಗಿದ್ದು ಸಂತ್ರಸ್ತ ಕುಟುಂಬದವರ ಮಕ್ಕಳೊಂದಿಗೆ ಕ್ರಿಕೆಟ್ ಆಡುವ ಜನರಿಗೆ ಧೈರ್ಯ ತುಂಬಿದ್ದಾರೆ.
ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಿತ್ತು. ಅದಕ್ಕೆ ಪ್ರತಿಯಾಗಿ ಮತ್ತೆ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ.
ಆಗ ಸಾಕಷ್ಟು ಮಂದಿ ಗಾಯಗೊಂಡಿದ್ದಾರೆ. ಈ ಗಾಯಾಳುಗಳನ್ನು ಭೇಟಿಯಾಗಿರುವ ಒಮರ್ ಅಬ್ದುಲ್ಲಾ ನಿಮ್ಮ ಜತೆ ನಾವಿದ್ದೇವೆ ಧೈರ್ಯವಾಗಿರಿ ಎಂಬ ಸಂದೇಶ ಅವರು ನೀಡಿದ್ದಾರೆ.