ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಚನ್ನಪಟ್ಟಣ:
ಜನರು ಸಿ.ಪಿ.ಯೋಗೇಶ್ವರ ನ್ನು ಆಶೀರ್ವದಿಸಿ ಬೆಂಬಲಿಸುವ ನಂಬಿಕೆಯಿದೆ.  ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement - 

ಅವರು ಇಂದು  ಚನ್ನಪಟ್ಟಣ ಉಪಚುನಾವಣೆ ನಿಮಿತ್ತ ಚನ್ನಪಟ್ಟಣ ತಹಶೀಲ್ದಾರ್  ರವರ ಕಚೇರಿಯಲ್ಲಿ ಇಂದು ತಮ್ಮ ಪಕ್ಷದ ಅಭ್ಯರ್ಥಿಯಾದ ಸಿ ಪಿ ಯೋಗೇಶ್ವರ್  ರವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಯಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

- Advertisement - 

ಚನ್ನಪಟ್ಟಣದ ಉಪಚುನಾವಣೆಯಲ್ಲಿ ಜೆಡಿಎಸ್ ನವರು ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುತ್ತಾರೆ ಎನ್ನುವುದು ಮುಖ್ಯವಲ್ಲ. ಸಿ.ಪಿ. ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದು, ಎರಡು ಬಾರಿ ಶಾಸಕರಾಗಿದ್ದರು. ಬಿಜೆಪಿ ಹಾಗೂ ಎನ್ ಡಿ ಎ ನಿಂದ ಅವರಿಗೆ ಅನ್ಯಾಯವಾದ ಕಾರಣ ಅವರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ. 

ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನೊಪ್ಪಿ ಮರಳಿ ಬಂದಿರುವ ಯೋಗೇಶ್ವರ್ ನ್ನು ಇಡೀ ಕಾಂಗ್ರೆಸ್ ಪಕ್ಷ ಸ್ವಾಗತಿಸಿದೆ. ಸಿ.ಪಿ.ಯೋಗೇಶ್ವರ ಅವರು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ. 

- Advertisement - 

ಜೆಡಿಎಸ್ ಬಿಜೆಪಿಯವರು ಚನ್ನಪಟ್ಟಣ ಕ್ಷೇತ್ರಕ್ಕೆ ಯಾರನ್ನೇ ನಿಲ್ಲಿಸಿದರೂ ಕೂಡ, ಕಾಂಗ್ರೆಸ್ ನ  ಅಭ್ಯರ್ಥಿಯೇ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.

 ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಗ್ಯಾರಂಟಿ ಯೋಜನೆಗಳು ನುಡಿದಂತೆ ನಡೆಯುವ ನಮ್ಮ ಬದ್ಧತೆಯನ್ನು ತೋರಿಸುತ್ತದೆ ಎಂದರು.

Share This Article
error: Content is protected !!
";