ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾಜ್ಯದ ಜನತೆಗೆ ಶುಭ ಹಾರೈಸಿದರು.

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು.
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

