ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ಇಂದು ನಿರ್ಧಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಅಂತ್ಯವಾಗಿದ್ದು ಮಂಗಳವಾರ ಜನಪ್ರತಿನಿಧಿಗಳ ಹೈಕೋರ್ಟ್​ ತನ್ನ ತೀರ್ಪು ಪ್ರಕಟಿಸಲಿದೆ.

ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ ನ್ಯಾಯಧೀಶರಾದ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದ್ದು ಸಿದ್ದರಾಮಯ್ಯ ಅವರ ಭವಿಷ್ಯ ನಿರ್ಧಾರವಾಗಲಿದೆ. ಸುಪ್ರೀಂ ಕೋರ್ಟ್‌ವಕೀಲ ಅಭಿಷೇಕ್‌ಮನು ಸಿಂಘ್ವಿ ಸೇರಿದಂತೆ ಹಲವು ಹಿರಿಯ ವಕೀಲರು ಸಿದ್ದರಾಮಯ್ಯ ಪರ ವಾದ ಮಂಡಿಸಿದ್ದರೆ,

- Advertisement - 

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು. ಅಲ್ಲದೇ ದೂರುದಾರರಾದ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಪರ ವಕೀಲರು ಸಹ ತಮ್ಮ ವಾದ ಮಂಡಿಸಿದ್ದರು.

ಸೆಪ್ಟೆಂಬರ್ 12ರಂದು ಈ ಎಲ್ಲಾ ವಾದ ಪ್ರತಿವಾದ ಆಲಿಸಿದ್ದ ನ್ಯಾ. ಎಂ.ನಾಗಪ್ರಸನ್ನ ಅವರು ಆದೇಶವನ್ನು ಕಾಯ್ದಿರಿಸಿದ್ದು ತನ್ನ ತೀರ್ಪನ್ನು ಪ್ರಕಟಿಸಲಿದ್ದಾರೆ.  

- Advertisement - 

Share This Article
error: Content is protected !!
";