ವಕ್ಫ್ ಆಸ್ತಿಗಾಗಿ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ-ಮುಖ್ಯಮಂತ್ರಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ವಿಜಯಪುರ, ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

- Advertisement - 

ಅವರು ಎಕ್ಸ್ ತಮ್ಮ ಖಾತೆಯಲ್ಲಿ ಟ್ವೀಟ್ ಮಾಡಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್, ವಕ್ಫ್ ಸಚಿವರಾದ ಜಮೀರ್ ಅಹ್ಮದ್ ಅವರು ನಿನ್ನೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

- Advertisement - 

ರೈತರಿಗೆ ಸಮಸ್ಯೆ ಆಗಬಾರದು ಎಂಬ ನಮ್ಮ ನಿಲುವಿನಲ್ಲಿ ಯಾವ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

- Advertisement - 
Share This Article
error: Content is protected !!
";