ಕಾರ್ಯನಿರತ ಪತ್ರಕರ್ತರ ಸಂಘ: ಜಿಲ್ಲಾ ಚುನಾವಣಾಧಿಕಾರಿಯಾಗಿ ಚಿಕ್ಕಪ್ಪನಹಳ್ಳಿ ಷಣ್ಮುಖ ಅಧಿಕಾರ ಸ್ವೀಕಾರ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಚಿತ್ರದುರ್ಗ ಜಿಲ್ಲಾ ಘಟಕದ ಜಿಲ್ಲಾ ಚುನಾವಣಾಧಿಕಾರಿಯಾಗಿ ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ ನೇಮಕವಾಗಿದ್ದು, ಚುನಾವಣಾ ಕಚೇರಿ ನಗರದ ಪತ್ರಿಕಾ ಭವನದಲ್ಲಿ ಗುರುವಾರ ಅಧಿಕಾರ ಸ್ವೀಕರಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿರುವ ಓ.ಪರಮೇಶ್ವರಪ್ಪನವರು ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಚುನಾವಣಾಧಿಕಾರಿಯಾಗಿ ಇದುವರೆಗೂ ಕರ್ತವ್ಯನಿರ್ವಹಿಸಿದ್ದು, ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ಚುನಾವಣಾ ಕರ್ತವ್ಯ ನಿರ್ವಹಿಸಲು ಇನ್ನೂ ಮುಂದೆ ಸಾಧ್ಯವಾಗದ ಕಾರಣ ಜಿಲ್ಲಾ ಚುನಾವಣಾಧಿಕಾರಿಯ ಕರ್ತವ್ಯದಿಂದ ಬಿಡುಗಡೆಗೊಳಿಸಿ,
2025-28ನೇ ಸಾಲಿನ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾಧಿಕಾರಿಯಾಗಿ ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ ಅವರನ್ನು ನೇಮಕ ಮಾಡಲಾಗಿದೆ.
ಫೋಟೋ ವಿವರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಎನ್. ರವಿಕುಮಾರ್ ಅವರು ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ ಅವರಿಗೆ ಗುರುವಾರ ನೇಮಕಾತಿ ಪತ್ರ ನೀಡಿದರು.

