ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಚಿಕನ್‌ಗುನ್ಯಾ, ಡೆಂಘೀ ಹಾಗೂ ವೈರಲ್‌ಫೀವರ್‌ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಲ್ಲಿ ಆತಂಕ ಶುರುವಾಗಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.
ಅದಕ್ಷ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಹದಗೆಟ್ಟಿರುವ ಆರೋಗ್ಯ ಇಲಾಖೆ, ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳದೆ ಇನ್ನೂ ಗಾಢ ನಿದ್ರೆಗೆ ಜಾರಿದೆ ಎಂದು ಜೆಡಿಎಸ್ ಟೀಕಾಪ್ರಹಾರ ಮಾಡಿದೆ.