ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಗು ಚಿವುಟೋದು ಅವರೇ ತೊಟ್ಟಿಲು ತೂಗೋದು ಅವರೇ…ತುಂಬಾ ಚೆನ್ನಾಗಿದೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ ನಿಮ್ಮ ನಾಟಕ! ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಮಾಧ್ಯಮಗಳ ಮುಂದೆ ಕೈ ಕೈ ಹಿಡಿದು ಒಗ್ಗಟ್ಟು ಪ್ರದರ್ಶನದ ನಾಟಕ, ತೆರೆಮರೆಯಲ್ಲಿ ಬೆಂಬಲಿಗರ ಮೂಲಕ ಬೆನ್ನಿಗೆ ಚೂರಿ ಇರಿತ. ಒಟ್ಟಿನಲ್ಲಿ ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ, ಸಿದ್ದರಾಮಯ್ಯ ಹಾಗು ಡಿ.ಕೆ. ಶಿವಕುಮಾರ್ ಅವರ ಜಗಳದಲ್ಲಿ ಕರ್ನಾಟಕ ಬಡವಾಗುತ್ತಿದೆ ಎಂದು ಅಶೋಕ್ ದೂರಿದ್ದಾರೆ.

