ಮಕ್ಕಳು ಗರ್ಭಿಣಿಯರಿಗೆ ಕಬ್ಬಿಣಾಂಶದ ಅವಶ್ಯಕತೆ ಹೆಚ್ಚು-ವೀಣಾ

WhatsApp
Telegram
Facebook
Twitter
LinkedIn

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಹಿಳೆಯರಿಗೆ, ಮಕ್ಕಳಿಗೆ, ಗರ್ಭಿಣಿಯರಿಗೆ ಹಾಗೂ ಹದಿಹರೆಯದವರಿಗೆ ಕಬ್ಬಿಣಾಂಶದ ಅವಶ್ಯಕತೆ ಹೆಚ್ಚಾಗಿರುತ್ತದೆ. ದೇಹದಲ್ಲಿ ಕಬ್ಬಿಣಾಂಶದ ಕೊರತೆಯಿಂದ ರಕ್ತಹೀನತೆ ಉಂಟಾಗುತ್ತದೆ ಎಂದು ಶಿಶು ಅಭಿವೃದ್ಧಿ ಅಧಿಕಾರಿ ವೀಣಾ ಹೇಳಿದರು.

ಪೋಷಣ ಮಾಸಾಚರಣೆ ಕಾರ್ಯಕ್ರಮ 2024 ಅಂಗವಾಗಿ ನಗರದ ಚಿತ್ರದುಗ ಪಿ & ಟಿ ಕ್ವಾಟರ್ಸ್ ಈಶ್ವರ ದೇವಸ್ಥಾನದ ಬಳಿ ಆಯೋಜಿಸಲಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಆದ್ದರಿಂದ ಊಟದಲ್ಲಿ ಕಬ್ಬಿಣಾಂಶ ಹೆಚ್ಚಿರುವಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆಯಿಂದ ನೀಡುವ ಪೋಲಿಕ್ ಆಮ್ಲ್ ಮಾತ್ರೆಗಳನ್ನು ತಪ್ಪದೇ ತೆಗೆದುಕೊಳ್ಳಬೇಕು. ಕಬ್ಬಿಣಾಂಶದ ಜೊತೆ ಆಹಾರದಲ್ಲಿ ಹೆಚ್ಚಿನ ರೀತಿಯಲ್ಲಿ ನಾರಿನ ಅಂಶ ಹೆಚ್ಚಿರುವ ತರಕಾರಿಗಳನ್ನು ಸೇವಿಸುವಂತೆ ತಿಳಿಸಿದರು.

ಜಿಲ್ಲಾ ಕಾರ್ಯಕ್ರಮ ಸಂಯೋಜಕ ಕರಕಪ್ಪ ಮೇಟಿ ಮಾತನಾಡಿ ಪೋಷಣ ಅಭಿಯಾನ ಕಾರ್ಯಕ್ರಮವನ್ನು 2018 ಮಾಚ್ 8 ರಂದು ಗೌರವಾನ್ವಿತ ಪ್ರಧಾನಮಂತ್ರಿಗಳು ರಾಜಸ್ಥಾನದಲ್ಲಿ ಆರಂಭಿಸಿದರು. ಇದರಲ್ಲಿ 0-6 ವರ್ಷದ ಮಕ್ಕಳು, ಗರ್ಭಿಣಿಯರು, ಬಾಣಂತಿಯರು,ಮಹಿಳೆಯರು,ಹದಿಹರೆಯದವರು ಅಪೌಷ್ಠಕತೆ, ರಕ್ತಹೀನತೆ,ಕಡಿಮೆ ಹುಟ್ಟುತೂಕ, ಅನೀಮಿಯಾದಿಂದ ಬಳಲುತ್ತಿರುವರಿಗೆ ಪೌಷ್ಠಿಕ ಆಹಾರ ನೀಡಲಾಗುವುದು ಎಂದರು. ಇದೇ ವೇಳೆ 11 ಜೀವಸತ್ವಗಳು ಮತ್ತು ಅವುಗಳ ಕೊರತೆಯಿಂದ ಬರುವ ರೋಗಗಳು ಹಾಗೂ ನಿಯಂತ್ರಣಾ ಕ್ರಮಗಳ ಬಗ್ಗೆ ತಿಳಿಸಿದರು.

ಅಂಗನವಾಡಿ ಮೇಲ್ವಿಚಾರಕ ಮಂಜುಳಾ ಹೆಚ್,ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು, ಕಾರ್ಯಕ್ರಮದಲ್ಲಿ ಆರೋಗ್ಯ ಸಹಾಯಕ ವೀಣಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾಲ್ಲೂಕು ಸಂಯೋಜಕರಾದ ಪ್ರದೀಪ, ಮೈಲಾರಲಿಂಗೇಶ್ವರ ಶಾಲೆಯ ಮುಖ್ಯೋಪಾಧ್ಯಾಯ ಸಿ,ಆರ್ ಶರಣಪ್ಪ, ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು ಹಾಗೂ ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಭಾಗವಹಿಸಿದ್ದರು.

 

News Desk   About Us
For Feedback - [email protected]

LATEST Post

error: Content is protected !!
WhatsApp Icon Telegram Icon