ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಜೀವನದಲ್ಲಿ ಶಿಕ್ಷಣ ಮಹತ್ವದ ಘಟ್ಟ ವಿದ್ಯಾಭ್ಯಾಸ ಜೀವನದ ಅವಿಭಾಜ್ಯ ಅಂಗ. ಏಕಾಗ್ರತೆ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಅತ್ಯಗತ್ಯ. ಜೀವನವನ್ನು ರೂಪಿಸಿಕೊಳ್ಳುವಲ್ಲಿ ಶಿಕ್ಷಣ ಅತ್ಯಮೂಲ್ಯವಾಗಿದೆ ಸಹಾಯಕ ಗವರ್ನರ್ ಕಿರಣ್ ಹೇಳಿದರು.
ನಗರದ ಶ್ರೀ ಮೋಕ್ಷಗುಂಡಮ್ ವಿಶ್ವೇಶ್ವರಯ್ಯ ವಿದ್ಯಾಮಂದಿರ ಶಾಲೆಯಲ್ಲಿ ಕಿರಣ್ ಇವರಿಂದ “ಅಧ್ಯಯನದಲ್ಲಿ ಏಕಾಗ್ರತೆ” ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡಿದರೆ ವಿದ್ಯಾರ್ಥಿ ಜೀವನದಲ್ಲಿ ಸಾಧನೆಯತ್ತ ಮುನ್ನಡೆಯಬಹುದು ಮತ್ತು ಮಹಾನ್ ವ್ಯಕ್ತಿಗಳಾದ ಸ್ವಾಮಿ ವಿವೇಕಾನಂದರ ಸಾಧನೆಗಳು ಮತ್ತು ಸರ್ ಎಂ ವಿಶ್ವೇಶ್ವರಯ್ಯನವರ ಗುರಿಗಳ ಬಗ್ಗೆ ವಿವರವಾಗಿ ತಿಳಿಸಿದರು.
ಸಮಸ್ಯೆಗಳು ಬಂದಾಗ ಎದೆಗುಂದದೆ ಎದುರಿಸಬೇಕು. ವಿದ್ಯಾಭ್ಯಾಸ ಒಂದು ಅಸ್ತ್ರ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ತಂದೆ- ತಾಯಿ ಗುರುಗಳಿಗೆ ವಿಧೇಯರಾಗಿರಿ ಎಂದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರೋಟರಿ ಅಧ್ಯಕ್ಷ ವರುಣ್ ಇವರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕಿರಣ್‌ರವರಿಗೆ ಶಾಲೆಯ ಮುಖ್ಯ ಶಿಕ್ಷಕ ಜಿ.ತಿಪ್ಪೇಸ್ವಾಮಿ ಗೌರವ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಹೆಚ್.ಎಂ.ಬಸವರಾಜ್, ಮುಖ್ಯ ಶಿಕ್ಷಕ ಜಿ.ತಿಪ್ಪೇಸ್ವಾಮಿ, ಹಿರಿಯ ಶಿಕ್ಷಕಿ ಜಿ.ಪದ್ಮಜಾ ಹಾಜರಿದ್ದರು. ಶಾಲಾ ಶಿಕ್ಷಕ ಶಿಕ್ಷಕಿಯರು ಭಾಗವಹಿಸಿದ್ದರು.

