ಕಳಪೆ ಗುಣಮಟ್ಟದ ಊಟ ಸೇವಿಸಿದ ಮಕ್ಕಳು ಅಸ್ವಸ್ಥ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೇ, ಇಂತಹ ಯೋಗ್ಯವಲ್ಲದ ಆಹಾರವನ್ನು ಶಾಲಾ ಮಕ್ಕಳಿಗೆ ತಿನ್ನಿಸುವುದು ಎಷ್ಟು ಸರಿ ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರ, ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಆಹಾರ ಧಾನ್ಯಗಳನ್ನು ಪೂರೈಸಿ ಬಡವರ ಮಕ್ಕಳ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದೆ. 

- Advertisement - 

ಅಕ್ಷರ ದಾಸೋಹ ಯೋಜನೆಯಡಿ ರಾಜ್ಯದ ಹಲವೆಡೆ ಕಳಪೆ ಗುಣಮಟ್ಟದ ಊಟ ಸೇವಿಸಿದ ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.

ಇಂತಹ ಪ್ರಕರಣಗಳು ಮರುಕಳಿಸುತ್ತಿರುವುದು ಸಿದ್ದರಾಮಯ್ಯ ಸರ್ಕಾರದ ಬೇಜಾವ್ದಾರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.

- Advertisement - 

 

 

 

 

Share This Article
error: Content is protected !!
";