ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ ಸೇರಿ 13 ಜಿಲ್ಲೆಗಳಲ್ಲಿ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ ಮಾಡಲು ಒಂದು ವಾರದೊಳಗೆ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು. ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಗೆ ಅನುಮತಿ ನೀಡಿದ್ದು
,

ಕ್ವಿಂಟಾಲ್‌ಗೆ 5,650 ರೂ.ಗಳಂತೆ ಖರೀದಿಸಲಾಗುವುದು. ನೋಂದಣಿಗೆ 80 ದಿನ ಹಾಗೂ ಖರೀದಿಗೆ 90 ದಿನ ನಿಗದಿಪಡಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌. ಪಾಟೀಲ್‌ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ನಾಫೆಡ್‌ಮತ್ತು ಎನ್‌ಸಿಸಿಎಫ್‌ಸಂಸ್ಥೆಗಳನ್ನು ಹಾಗೂ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿ ಮತ್ತು ಕಲಬುರಗಿಯ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯನ್ನು ಖರೀದಿ ಸಂಸ್ಥೆಗಳನ್ನಾಗಿ ನೇಮಕ ಮಾಡಿ ಕಡಲೆಕಾಳು ಖರೀದಿ ಮಾಡಬೇಕಾದ ಜಿಲ್ಲೆಗಳನ್ನು ಹಂಚಿಕೆ ಮಾಡಲಾಗಿದೆ. ರೈತರು ತಮ್ಮ ಸಮೀಪದ ಟಿ.ಎ.ಪಿ.ಸಿ.ಎಂ.ಎಸ್‌, ಎಫ್‌.ಪಿ.ಒ ಹಾಗೂ ಪಿ.ಎ.ಸಿ.ಎಸ್‌ಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು.

ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್‌, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಬಾಗಲಕೋಟೆ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

 

 

Share This Article
error: Content is protected !!
";