ಚಿತ್ರದುರ್ಗ ವೈದ್ಯಕೀಯ ಕಾಲೇಜು: ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿವಿಧ ಭಾಗಗಳಲ್ಲಿ ಬೋಧಕ ಹುದ್ದೆಗಳಿಗೆ ಗುತ್ತಿಗೆ ಆಧಾರ/ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಅಭ್ಯರ್ಥಿಗಳು 2025 ಜನವರಿ 01 ಸಂಜೆ 5 ಗಂಟೆಯ ಒಳಗಾಗಿ ಅರ್ಜಿಗಳನ್ನು ಸಂಸ್ಥೆಗೆ ತಲುಪಿಸುವುದು. ಸಂದರ್ಶನದ ದಿನಾಂಕವನ್ನು ಸಂಸ್ಥೆಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು.  

ಅರ್ಹತೆ, ಮೀಸಲಾತಿ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಜಾಲತಾಣ https://cmcrichitradurga.karnataka.gov.in ನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೊಧನಾ ಸಂಸ್ಥೆಯ ನಿರ್ದೇಶಕ ಡಾ.ಯುವರಾಜ್ ತಿಳಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";