ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿವಿಧ ವಿಭಾಗಗಳಲ್ಲಿ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು 2024ರ ಡಿಸೆಂಬರ್ 14 ರೊಳಗೆ ಅರ್ಜಿಗಳನ್ನು ಸಂಸ್ಥೆಗೆ ತಲುಪಿಸಲು ಸೂಚಿಸಿದೆ.
ಸಂದರ್ಶನದ ದಿನಾಂಕವನ್ನು ಸಂಸ್ಥೆಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಅರ್ಹತೆ, ಮೀಸಲಾತಿ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಜಾಲತಾಣ http://cmcrichitrdurga.karnataka.gov.in ನ್ನು ಸಂಪರ್ಕಿಸಬಹುದು.
ಪೋರೆನ್ಸಿಕ್ ಮೆಡಿಸಿನ್, ಮೈಕ್ರೋಬಯಾಲಜಿ, ಪೆಥಾಲಜಿ, ಫಾರ್ಮಕೋಲಜಿ, ಕಮ್ಯೂನಿಟಿ ಮೆಡಿಸಿನ್ ವಿಭಾಗದಲ್ಲಿ ಪ್ರಾಧ್ಯಾಪಕರ ಹುದ್ದೆಗಳಿಗೆ, ಡೆರ್ಮೆಟಾಲಜಿ, ಫಾರ್ಮಕೋಲಜಿ, ಕಮ್ಯೂನಿಟಿ ಮೆಡಿಸಿನ್, ಸೈಕಿಯಾಟ್ರಿ ವಿಭಾಗದಲ್ಲಿ ಸಹ ಪ್ರಾಧ್ಯಾಪಕರ ಹುದ್ದೆಗಳಿಗೆ ಹಾಗೂ
ಕಮ್ಯೂನಿಟಿ ಮೆಡಿಸಿನ್, ಮೈಕ್ರೋಬಯಾಲಜಿ, ಪೆಥಾಲಜಿ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.