ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ
ಚಿತ್ರದುರ್ಗ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ರಾಮಪ್ಪ ಅವರನ್ನು ಮೈಸೂರಿನ ಹುಣಸೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳನ್ನಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ರಾಣೇಬೆನ್ನೂರು ಹಾಗೂ ಹಾವೇರಿ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿಗಳಾಗಿ ಕೆಲಸ ಮಾಡಿದ್ದ ರಾಮಪ್ಪ ಅವರು ಆ ವಿಧಾನಸಭಾ ಕ್ಷೇತ್ರಗಳ ಗೆಲುವಿಗೆ ಸಹಕಾರಿಯಾಗಿದ್ದರು. ಇವರನ್ನು ಮೈಸೂರಿನ ಹೆಚ್.ಡಿ.ಕೋಟೆ ಹುಣಸೂರು ಕ್ಷೇತ್ರಕ್ಕೆ ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.