ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ರಾಜಧಾನಿ ಬೆಂಗಳೂರು, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಳ್ಳಾರಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.
ಬೆಂಗಳೂರು ಸುತ್ತ ಮುತ್ತಲಿನಲ್ಲಿ ಈಗಾಗಲೇಮಳೆ ಆರಂಭವಾಗಿದ್ದು, ನಗರದ ಉತ್ತರ ಮತ್ತು ಈಶಾನ್ಯ ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಭಾರೀ ಗಾಳಿ ಬೀಸುತ್ತಿರುವ ಕುರಿತು ವರದಿಯಾಗಿದೆ. ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯೂ ಸುರಿದಿದೆ.
ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ, ರಾಯಚೂರು, ಬೀದರ್, ಬೆಂಗಳೂರು (ನಗರ ಮತ್ತು ಗ್ರಾಮಾಂತರ), ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿತ್ರದುರ್ಗ, ಹಾವೇರಿ, ಚಾಮರಾಜನಗರ, ಮೈಸೂರು, ಬಳ್ಳಾರಿ ಮತ್ತು ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.