ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಶ್ರೀ ಸುತ್ತೂರು ಮಹಾಸಂಸ್ಥಾನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳೊಂದಿಗೆ ಗೌರವಪೂರ್ವಕವಾಗಿ ಭೇಟಿ ಮಾಡಲಾಯಿತು.
ಪರಮಪೂಜ್ಯರೊಂದಿಗೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿದ್ದು ನನ್ನ ಸುಯೋಗ ಎಂದೇ ಭಾವಿಸಿದ್ದೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

