ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನನ್ನನ್ನು ಅಕ್ರಮವಾಗಿ ಬಂಧಿಸಿ, ದೂರುಕೊಟ್ಟ ಬಳಿಕವೂ ಎಫ್ಐಆರ್ ಹಾಕದೆ ನನ್ನ ಮೇಲೆ ದೌರ್ಜನ್ಯವೆಸಗಿ, ಕೆಲವು ಪ್ರಭಾವಿ ವ್ಯಕ್ತಿಗಳ ನಿದರ್ಶನದಂತೆ ರಾತ್ರಿ ಇಡೀ ನಿರ್ಜನ ಪ್ರದೇಶಗಳಲ್ಲಿ ಸುತ್ತಾಡಿಸಿ,
ಸಂಪೂರ್ಣವಾಗಿ ಕಾನೂನಿನ ಉಲ್ಲಂಘನೆ ಮಾಡಿದ ಪೊಲೀಸ್ ಇಲಾಖೆಯ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್ ಅವರಿಗೆ ಕರ್ನಾಟಕ ಬಿಜೆಪಿ ನಾಯಕರ ನಿಯೋಗದೊಂದಿಗೆ ತೆರಳಿ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಕೆ.ಎಸ್.ನವೀನ್, ಎನ್.ರವಿಕುಮಾರ್, ರಾಜೀವ್ ಮತ್ತಿತರರು ಇದ್ದರು.