ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಹೆಬ್ಬಾಳದ ಬಳಿ ನಡೆಯುತ್ತಿರುವ ಮೆಟ್ರೋ ಕಾಮಗಾರಿ ಸ್ಥಳಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಾಗೆಯೇ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು. ಈ ವೇಳೆ ಬಿಡಿಎ ಅಧ್ಯಕ್ಷರಾದ ಹ್ಯಾರಿಷ್ ಅವರು ಉಪಸ್ಥಿತರಿದ್ದರು.
ಜೆಪಿನಗರ 4ನೇ ಹಂತದಿಂದ -ಕೆಂಪಾಪುರ ಸಂಪರ್ಕಿಸುವ ನೂತನ ಮೆಟ್ರೋ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ಗೊರಗುಂಟೆಪಾಳ್ಯ ಮೆಟ್ರೋ ನಿಲ್ದಾಣದ ಬಳಿ ಯೋಜನೆಯ ನೀಲನಕ್ಷೆ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ಡಿಸಿಎಂ ನೀಡಿದರು.
ಸುಮನಹಳ್ಳಿ ಹಾಗೂ ಮೈಸೂರು ರಸ್ತೆ ಜಂಕ್ಷನ್‌ಬಳಿ ಬಿಎಂಆರ್‌ಸಿಎಲ್‌ಕೈಗೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳ ಸಂಬಂಧ ಪರಿಶೀಲನೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ಡಿಸಿಎಂ ಡಿ ಕೆ ಶಿವಕುಮಾರ್ ನೀಡಿದರು.