ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ದಾವಣಗೆರೆ ವಿಶ್ವವಿದ್ಯಾನಿಲಯ ಎಂ.ಕಾಂ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ೧೧ರಂದು ನಡೆದ ಪರೀಕ್ಷೆಯಲ್ಲಿ ‘ಬಿಸಿನೆಸ್ ಅಪ್ಲಿಕೇಷನ್ ಅಂಡ್ ಆಪರೇಶನ್ ರಿಸರ್ಚ್’ ಪ್ರಶ್ನೆಪತ್ರಿಕೆಯಲ್ಲಿ ತಾಂತ್ರಿಕ ನ್ಯೂನ್ಯತೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ವಿಶ್ವವಿದ್ಯಾನಿಲಯದ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ್ ಸ್ಪಷ್ಟನೆ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಆಗಿರುವ ತೊಂದರೆಯನ್ನು ನಿರ್ಲಕ್ಷ್ಯಸಲಾಗುವುದಿಲ್ಲ. ಆದ್ದರಿಂದ ನ್ಯೂನ್ಯತೆ ಕುರಿತು ಸಂಬಂಧಿಸಿದ ಪರೀಕ್ಷಾ ಮಂಡಳಿ ವಿಚಾರಣೆ ನಡೆಸಿ, ವರದಿ ಪರಿಶೀಲಿಸಿದ ನಂತರ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಪರಿಗಣಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು.
ಈ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ರೀತಿ ಆತಂಕ ಪಡಬಾರದು ಎಂದು ತಿಳಿಸಿದ್ದಾರೆ.