ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗುವ ರಾಜ್ಯಮಟ್ಟದ ಸಾಮಾನ್ಯ ಪ್ರವೇಶ ಪರೀಕ್ಷೆಯು ಏಪ್ರಿಲ್ 12 ರಂದು ನಡೆಯಲಿದೆ.
ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ (CBSE) ಪ್ರವೇಶ ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಏ.12 ರಂದು ಬೆಳ್ಳಗ್ಗೆ 11 ರಿಂದ ಅಪರಾಹ್ನ 1 ಗಂಟೆವರೆಗೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೌಲಾನಾ ಆಜಾದ್ ಮಾದರಿ ಶಾಲೆ, ಉರ್ದು ಶಾಲಾ ಆವರಣ ಮತ್ತು ಸರ್ಕಾರಿ ಹೆಣ್ಣು ಮಕ್ಕಳ ಪ್ರೌಢಶಾಲೆ (ಜೂನಿಯರ್ ಕಾಲೇಜು ಹತ್ತಿರ), ವಿಜಯಪುರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು https://dom.karnataka.gov.in/en ವೆಬ್ಸೈಟ್ನಲ್ಲಿ ಪ್ರವೇಶ ಪತ್ರ/ ಹಾಲ್ ಟಿಕೆಟ್ಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಕುಂದು ಕೊರತೆಗಳಿದ್ದಲ್ಲಿ ಅಥವಾ ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು ಜಿಲ್ಲಾ ಕಛೇರಿ, ತಾಲ್ಲೂಕು ಮಾಹಿತಿ/ ಪ್ರಾಂಶುಪಾಲರನ್ನು ಸಂಪರ್ಕಿಸಬುದು.
ಜಿಲ್ಲಾ ಕಛೇರಿ: 080-29787455, ಪ್ರಾಂಶುಪಾಲರು: 9632249214, 8660971267, ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ: 8861926851, 9845622337, ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ: 7676905779, 8861940531,ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ: 9986874875, 9916578413, ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ: 8904491033, 7483359675, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ: 8277799990/9535808084/ 9606096010ಗೆ ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

