ಮಜರಾ ಹೊಸಹಳ್ಳಿ ಗ್ರಾಮ ಪಂಚಾಯ್ತಿಯಿಂದ ಸ್ವಚ್ಛತಾ ಕಾರ್ಯಕ್ರಮ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಮಜರಹೊಸಹಳ್ಳಿ ಗ್ರಾಮದಲ್ಲಿ ಪಂಚಾಯತಿಯ ಎಲ್ಲಾ ಸದಸ್ಯರು ಹಾಗೂ ಪೌರಕಾರ್ಮಿಕರಿಂದ ಸ್ವಚ್ಛ ಶನಿವಾರ ಕಾರ್ಯಕ್ರಮವನ್ನು
ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ರಸ್ತೆ ಬದಿ ಬಿದ್ದಿದ್ದ ಪ್ಲಾಸ್ಟಿಕ್ ಹಾಗೂ ಇನ್ನಿತರ ತ್ಯಾಜ್ಯ ವಸ್ತುಗಳನ್ನು  ವಿಂಗಡಿಸಿ ಕಸದ ಗಾಡಿಗೆ ತುಂಬಲಾಯಿತು ಕಾರ್ಯಕ್ರಮದಲ್ಲಿ ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು  ಸೇರಿದಂತೆ ಗ್ರಾಮ ಪಂಚಾಯತಿಯ ಎಲ್ಲರೂ ಭಾಗವಹಿಸಿದ್ದುರು.

ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿಯ ಸ್ವಚ್ಛ ಶನಿವಾರ ಕಾರ್ಯಕ್ರಮ ಯಶಸ್ವಿಯಾಯಿತು. ಪ್ರತಿ ತಿಂಗಳ ಮೂರನೇ ಶನಿವಾರ ಈ ರೀತಿಯ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಹಮ್ಮಿಕೊಂಡಿದ್ದು ಗ್ರಾಮಸ್ಥರು ಇಂತಹ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

 

 

 

Share This Article
error: Content is protected !!
";