ಪರಿಸರದ ಸ್ವಚ್ಛತೆ ಜೊತೆಗೆ ವೈಯಕ್ತಿಕ ಸ್ವಚ್ಛತೆ ಬಹಳ ಮುಖ್ಯ-ಪೌರಾಯುಕ್ತ ವಾಸೀಂ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಸಿ ಕಸ ಒಣ ಕಸ ಬೇರ್ಪಡಿಸಿ ನಗರಸಭೆಯ ವಾಹನಕ್ಕೆ ನೀಡಬೇಕು, ಪರಿಸರ ಸ್ವಚ್ಛತೆ ಕಾಪಾಡಬೇಕೆಂದು ನಗರಸಭೆ ಪೌರಾಯುಕ್ತ ಎ ವಾಸೀಂ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವೇದಾವತಿ ನಗರದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸ್ವಚ್ಛತೆ ಹಾಗೂ ಪರಿಸರದ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

- Advertisement - 

ಶಾಲಾ ಆವರಣ, ತರಗತಿಗಳು ಮತ್ತು ತಮ್ಮ ಮನೆಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜವಾಬ್ದಾರಿ ಮಕ್ಕಳ ಮೇಲಿರುತ್ತದೆ. ಕಸವನ್ನು ಸರಿಯಾಗಿ ವಿಲೇವಾರಿ ಮಾಡುವುದು, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು, ಗಿಡಗಳನ್ನು ನೆಡುವುದು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಸ್ವಚ್ಛ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ವಾಸೀಂ ಕರೆ ನೀಡಿದರು.

ವಿದ್ಯಾರ್ಥಿಗಳು ಕೇವಲ ಪರಿಸರ ಸ್ವಚ್ಛತೆ ಮಾಡಿದರೆ ಸಾಲದು, ವಿದ್ಯಾರ್ಥಿಗಳು ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಹೇಕು. ಪ್ರತಿಯೊಬ್ಬ ವಿದ್ಯಾರ್ಥಿ ವೈಯಕ್ತಿಕ ನೈರ್ಮಲ್ಯ ಕಾಪಾಡಿಕೊಳ್ಳಬೇಕು, ಸಮವಸ್ತ್ರ ಧರಿಸಬೇಕು ಮತ್ತು ಊಟಕ್ಕೂ ಮುನ್ನ ಕೈ ತೊಳೆಯುವುದನ್ನು ರೂಢಿಸಿಕೊಳ್ಳಬೇಕು ಎಂದು ಪೌರಾಯುಕ್ತರು ಕಿವಿ ಮಾತು ಹೇಳಿದರು.

- Advertisement - 

ಶಾಲಾ ಪರಿಸರದ ತರಗತಿ, ಆವರಣ ಮತ್ತು ಶೌಚಾಲಯಗಳನ್ನು ಸ್ವಚ್ಛವಾಗಿಡುವುದು, ಕಸವನ್ನು ಡಸ್ಟ್‌ಬಿನ್‌ನಲ್ಲಿ ಹಾಕುವುದು.

ಜಾಗೃತಿ ಮೂಡಿಸುವುದು ಸ್ವಚ್ಛ ಭಾರತ ಅಭಿಯಾನದಡಿ ಜನರಲ್ಲಿ ಜಾಗೃತಿ ಮೂಡಿಸುವುದು, ಡಿಜಿಟಲ್ ಮಾಧ್ಯಮದ ಮೂಲಕ ಮಾಹಿತಿ ಹಂಚಿಕೊಳ್ಳುವುದು. ಪರಿಸರ ಸಂರಕ್ಷಣೆ ಗಿಡಗಳನ್ನು ನೆಡುವುದು ಮತ್ತು ಪೋಷಿಸುವುದು, ನೀರಿನ ಮಿತಬಳಕೆ ಮಾಡುವುದನ್ನು ಮಕ್ಕಳು ಶಾಲಾ ದಿನಗಳಲ್ಲೇ ಕಲಿಯಬೇಕು ಎಂದು ತಿಳಿಸಿದರು.

ತ್ಯಾಜ್ಯ ನಿರ್ವಹಣೆ ಒಣ ಮತ್ತು ಹಸಿ ಕಸವನ್ನು ಬೇರ್ಪಡಿಸಿ ವಿಲೇವಾರಿ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಸ್ವಚ್ಛತೆಯನ್ನು ಒಂದು ಜೀವನಶೈಲಿಯಾಗಿ ಅಳವಡಿಸಿಕೊಂಡಾಗ ಉತ್ತಮ ಆರೋಗ್ಯ ಮತ್ತು ಸುಸ್ಥಿರ ಪರಿಸರ ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ನಗರಸಭೆ ಪೌರಾಯುಕ್ತ ಎ ವಾಸೀಂ ಹೇಳಿದರು.

ಆರೋಗ್ಯ ನಿರೀಕ್ಷಕ ಅಶೋಕ್,  ಮುರಾರ್ಜಿ ದೇಸಾಯಿ ವಸತಿ ಶಾಲೆ ಶಿಕ್ಷಕರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ನಗರಸಭೆ ವತಿಯಿಂದ ವಿದ್ಯಾರ್ಥಿಗಳಿಗೆ ಸ್ವಚ್ಛತೆ ಬಗ್ಗೆ ಚಿತ್ರಕಲೆ ಏರ್ಪಡಿಸಲಾಗಿತ್ತು. ಉತ್ತಮ ಚಿತ್ರಕಲೆಗೆ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

 

 

Share This Article
error: Content is protected !!
";