ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಚಿಕ್ಕಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಳಕು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಹಮ್ಮಿಕೊಳ್ಳಲಾಗಿತ್ತು.
ಸಿಆರ್‌ಪಿ ಟಿ.ವಿ ತಿಪ್ಪೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ 7 ಕಾರ್ನರ್ ಗಳ ಬಗ್ಗೆ ವಿಸ್ತಾರವಾಗಿ ತಿಳಿಸಿದರು. ಚಳ್ಳಕೆರೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಕೆ.ಎಸ್ ಕಲಿಕಾ ಹಬ್ಬ ಮಕ್ಕಳ ಕಲಿಕೆಗೆ ಪ್ರೇರಣೆಯಾಗಿದೆ ಇದು ಮಕ್ಕಳ ಸರ್ವೊತೊಮುಖ ಅಭಿವೃದ್ದಿಗೆ ಪೂರಕವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಮುಖ್ಯ ಶಿಕ್ಷಕ ಜಗನ್ನಾಥ.ಕೆ.ಎಚ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಸಹ ಪಠ್ಯ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು. ಉತ್ತಮ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ತುಂಬಾ ಸಹಕಾರಿ ಎಂದು ಆಶಯ ವ್ಯಕ್ತಪಡಿಸಿದರು.
ತಳಕು ಕ್ಲಸ್ಟರ್ ಮುಖ್ಯ ಶಿಕ್ಷಕ ಹಾಗೂ ಮಕ್ಕಳು ಆಗಮಿಸಿ ಕಾರ್ಯಕ್ರಮಕ್ಕೆ ಮೆರಗು ನೀಡಿದರು. ತೀರ್ಪುಗಾರರಾಗಿ ಮಲ್ಲಮ್ಮ, ತಿಪ್ಪಿರಮ್ಮ , ಮಮತಾ, ಲಕ್ಷ್ಮೀದೇವಿ, ತ್ರಿವೇಣಿ, ಶಶಿಕಲಾ, ನವೀನ್ ಕುಮಾರ್, ತಿಮ್ಮಣ್ಣ, ರಾಜು ಹಾಗೂ ತಾಲೂಕು ಕ್ಲಸ್ಟರ್ ನ ಪ್ರತಿ ಶಾಲೆಯಿಂದ ಒಬ್ಬ ಶಿಕ್ಷಕರು ಬಂಜಗೆರೆ ಕ್ಲಸ್ಟರ್ ನ ಶಿಕ್ಷಕರು ಹಾಜರಿದ್ದರು.
ಎಸ್ ಡಿಎಂಸಿ ಉಪಾಧ್ಯಕ್ಷ ತಿಪ್ಪೇಸ್ವಾಮಿ, ಸದಸ್ಯರಾದ ಪಾಲಯ್ಯ, ಸುಜಾತ, ಕೀರ್ತನ, ಶಿಲ್ಪಮ್ಮ, ಸಿದ್ದಪ್ಪ, ಲಕ್ಷ್ಮೀದೇವಿ, ತಿಪ್ಪೇಸ್ವಾಮಿ ಹಾಗೂ ಗ್ರಾಮ ಪಂಚಾಯತಿ ಸದಸ್ಯರಾದ ಭಾಗ್ಯಮ್ಮ, ಗೌರಮ್ಮ ಬೋರಣ್ಣ ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.