ಸಣ್ಣ ಪ್ರಮಾಣದಲ್ಲಿ ಏರಿಕೆ ಹಾಲಿನ ದರ ಏರಿಕೆ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಸ್ತುತ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿರುವ ಕಾರಣದಿಂದ ಸಂಕಷ್ಟಕ್ಕೆ ಒಳಗಾಗಿರುವ ರಾಜ್ಯದ ಹೈನುಗಾರರ ನೆರವಿಗೆ ರಾಜ್ಯ ಸರ್ಕಾರವು ಧಾವಿಸಿದ್ದು
, ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ಬೆಲೆ ಏರಿಕೆ ಮಾಡಿದೆ.

ಕೆಎಂಎಫ್ನ ನಂದಿನಿ ಹಾಲಿನ ಬೆಲೆಗೆ ಹೋಲಿಸಿದರೆ ಹೊರರಾಜ್ಯಗಳ ಹಾಲು ಒಕ್ಕೂಟಗಳು ಮಾರಾಟ ಮಾಡುವ ದರ ಹೆಚ್ಚಿನದ್ದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಶುದ್ಧ ಹಾಗೂ ಗುಣಮಟ್ಟದ ದೃಷ್ಟಿಯಲ್ಲಿ ನಂದಿನಿ ಹಾಲು ಹಾಗೂ ಉತ್ಪನ್ನಗಳು ದೇಶದಲ್ಲೇ ಅತಿಹೆಚ್ಚು ಶ್ಲಾಘನೆಗೆ ಒಳಪಟ್ಟಿವೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ನಾನಾ ಭಾಗಗಳಿಂದ ನಂದಿನಿ ಹಾಲು ಹಾಗೂ ಇತರೆ ಉತ್ಪನ್ನಗಳಿಗೆ ಬೇಡಿಕೆ ವ್ಯಕ್ತವಾಗುತ್ತಿದೆ.

ಇದರಿಂದ ರಾಜ್ಯದ ಹೈನುಗಾರರಿಗೆ ಉತ್ತೇಜನ ಸಿಗುತ್ತಿದ್ದು, ಇದೀಗ ಸಣ್ಣ ಪ್ರಮಾಣದಲ್ಲಿ ಏರಿಕೆಯಾದ ಹಾಲಿನ ದರವು ನೇರವಾಗಿ ಹೈನುಗಾರರ ಕೈಸೇರುತ್ತಿರುವುದು ಪ್ರೋತ್ಸಾಹಕರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

 

Share This Article
error: Content is protected !!
";