ತ್ಯಾಗ, ಬಲಿದಾನಗೈದ ಅಮರವೀರರನ್ನು ಧನ್ಯತಾಭಾವದಿಂದ ಸ್ಮರಿಸೋಣ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶವನ್ನು ದಾಸ್ಯದಿಂದ ಬಿಡುಗಡೆಗೊಳಿಸಲು ನಡೆದ ದೀರ್ಘಕಾಲದ ಹೋರಾಟದಲ್ಲಿ ಭಾಗವಹಿಸಿದ್ದ ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭ ಭಾಯಿ ಪಟೇಲ್, ಮೌಲಾನಾ ಅಬುಲ್ ಕಲಾಂ ಆಜಾದ್, ಜವಾಹರಲಾಲ್ ನೆಹರು, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಮುಂತಾದ ಎಲ್ಲಾ ಅಮರವೀರರನ್ನು ಧನ್ಯತಾಭಾವದಿಂದ ಸ್ಮರಿಸೋಣ. ಅವರಿಗೆ ನಮಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿತ್ತು. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ದೋಂಡಿಯಾ ವಾಘ, ಹಲಗಲಿಯ ವೀರ ಬೇಡರು, ಮೈಲಾರ ಮಹಾದೇವಪ್ಪ, ಬೂದಿ ಬಸಪ್ಪ ನಾಯಕ ಮುಂತಾದವರು ಹಾಗೂ

- Advertisement - 

ಶ್ರೀರಂಗಪಟ್ಟಣ, ಸುರಪುರ, ಕಿತ್ತೂರು, ಈಸೂರು, ವಿಧುರಾಶ್ವತ್ಥ, ಶಿವಪುರ, ಅಂಕೋಲ ಮುಂತಾದ ಸ್ಥಳಗಳು ಬ್ರಿಟಿಷರನ್ನು ನಡುಗಿಸಿದ್ದವು. ಲಕ್ಷಾಂತರ ಜನರು ಸಕ್ರಿಯವಾಗಿ ಭಾಗವಹಿಸಿದ್ದರಲ್ಲದೆ, ಸಾವಿರಾರು ಜನರು ಜೀವ ತ್ಯಾಗ ಮಾಡಿದ್ದಾರೆ. ಅವರೆಲ್ಲರನ್ನೂ ಕೃತಜ್ಞತಾ ಪೂರ್ವಕವಾಗಿ ಗೌರವಿಸೋಣ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 

- Advertisement - 

Share This Article
error: Content is protected !!
";