ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನಲ್ಲಿಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿ ವಿಜೇತ ನಟಿ ಶಬಾನಾ ಆಜ್ಮಿ ಅವರಿಗೆ ಪ್ರಶಸ್ತಿಪತ್ರ ಮತ್ತು 10 ಲಕ್ಷದ ಚೆಕ್ ನೀಡಿ, ಗೌರವಿಸಲಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಶ್ವ ವಿಖ್ಯಾತ ಕವಿ, ಗೀತರಚನೆಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾದು ಕೋಕಿಲ, ಸರ್ಕಾರದ ಕಾರ್ಯದರ್ಶಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, 16 ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಅವರು ಉಪಸ್ಥಿತರಿದ್ದರು.