ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಗೃಹ ಕಚೇರಿ ಕೃಷ್ಣದಲ್ಲಿ “ಚೆನ್ನಡ ಹಾಕಿ ಪಂದ್ಯಾವಳಿ”ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.

- Advertisement - 

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು.

ಕೊಡವ ಸಂಸ್ಕೃತಿ ತನ್ನದೇ ಆದ ಭಿನ್ನತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಇದು ನಮ್ಮ ಸಂಸ್ಕೃತಿಯ ಹೆಮ್ಮೆ ಎಂದರು.

- Advertisement - 

2026ರ ಮೇ ತಿಂಗಳಲ್ಲಿ ನಡೆಯುವ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂಪಾಯಿ ಅನುದಾನ ಕೊಡುತ್ತೇವೆ. ಪಂದ್ಯಾವಳಿ ನೋಡಲು ನಾನೂ ಬರುತ್ತೇನೆ ಎಂದು ಭರವಸೆ ನೀಡಿದರು.

ಶಾಸಕರೂ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಮತ್ತು ಸಚಿವರಾದ ಬೋಸರಾಜು, ಬೈರತಿ ಸುರೇಶ್ ಮತ್ತು ಶಿವರಾಜ್ ತಂಗಡಗಿ ಸೇರಿ ಕೊಡವ ಸಮುದಾಯದ ಎಲ್ಲಾ ಮುಖಂಡರು ಉಪಸ್ಥಿತರಿದ್ದರು.

ಕೊಡವ ಸಮುದಾಯದ ಭಾಷಿಕ‌ಒಕ್ಕೂಟದ ಪದಾಧಿಕಾರಿಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ‌ಕೃಷ್ಣದಲ್ಲಿ ಭೇಟಿಯಾಗಿ ತಮ್ಮ ಬೇಡಿಕೆಗಳ ಬಗ್ಗೆ ಚರ್ಚಿಸಿ ಮನವಿ ಅರ್ಪಿಸಿತು.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶಾಸಕ ಎ.ಎಸ್.ಪೊನ್ನಣ್ಣ ನೇತೃತ್ವದಲ್ಲಿ ಕೆಂಬಟ್ಟಿ ಸಮಾಜದ ಪದಾಧಿಕಾರಿಗಳ ನಿಯೋಗ ಇಂದು‌ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಸಾಮಾಜಿಕ‌ಸಮಸ್ಯೆಗಳ ಬಗ್ಗೆ ಚರ್ಚಿಸಿ ಮನವಿ ಪತ್ರ ಅರ್ಪಿಸಿತು.‌

 

 

Share This Article
error: Content is protected !!
";