ಹುಬ್ಬಳ್ಳಿ ಪತ್ರಕರ್ತೆ ಚಿಕಿತ್ಸೆಗೆ 1.25ಲಕ್ಷ ರೂ ಪರಿಹಾರ ಮಂಜೂರು ಮಾಡಿದ‌ ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂಯುಕ್ತ ಕರ್ನಾಟಕದ ಹಿರಿಯ ಪತ್ರಕರ್ತೆ ಹುಬ್ಬಳ್ಳಿಯ ಜಯಶ್ರೀ ಅವರ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1.25ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.

ಕಳೆದ ಎರಡೂವರೆ ದಶಕಗಳಿಂದ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಜಯಶ್ರೀ ಅವರು ಇತ್ತೀಚೆಗೆ ಅನಾರೋಗ್ಯದಿಂದ ಶಸ್ತ್ರಚಿಕಿತ್ಸೆಗೊಳಗಾಗಿದ್ದು, 3.50ಲಕ್ಷಕ್ಕೂ ಹೆಚ್ಚು ಖರ್ಚು ಮಾಡಿಕೊಂಡಿದ್ದರು.

- Advertisement - 

ಆರ್ಥಿಕವಾಗಿ ಸಂಷ್ಟದಲ್ಲಿದ್ದ ಪತ್ರಕರ್ತೆ ಜಯಶ್ರೀ ಅವರಿಗೆ ನೆರವು ನೀಡುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಮೇರೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಮಂಜೂರು ಮಾಡಲಾಗಿದೆ.

ಕೆಯುಡಬ್ಲ್ಯೂಜೆ ಮನವಿ ಮೇರೆಗೆ ಪರಿಹಾರ ಮಂಜೂರು ಮಾಡಿದ ಸಿಎಂ‌ ಸಿದ್ದರಾಮಯ್ಯ‌ಅವರಿಗೆ, ಈ ನಿಟ್ಟಿನಲ್ಲಿ ಸಹಕಾರ ನೀಡಿದ

- Advertisement - 

ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಧನ್ಯವಾದಗಳನ್ನು ಸಲ್ಲಿಸಿದೆ ಎಂದು ಅವರು ತಿಳಿಸಿದ್ದಾರೆ.

 

 

Share This Article
error: Content is protected !!
";