ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಡದೇವತೆ ತಾಯಿ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2025ರ ಮೈಸೂರು ದಸರಾ ಮಹೋತ್ಸವವನ್ನು ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಿದರು.
ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡದ ಹೆಮ್ಮೆಯ ಸಾಹಿತಿ ಶ್ರೀಮತಿ ಬಾನು ಮುಷ್ತಾಕ್ ಅವರ ಜೊತೆಗೂಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಆರಾಧಿಸಿ, ಸಂಭ್ರಮಿಸುವ ಈ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಜರಿದ್ದು, ಸಮಸ್ತ ಕನ್ನಡಿಗರ ಬಾಳು ಹಸನಾಗಲಿ ಎಂದು ತಾಯಿಯಲ್ಲಿ ಪ್ರಾರ್ಥಿಸಿದರು.

