ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರೈತರಿಗೆ ವಂಚಿಸಿದ ಆರೋಪಿಗಳನ್ನು ರಕ್ಷಿಸುವಂತೆ ಮುಖ್ಯಮಂತ್ರಿಗಳ ಆಪ್ತ, ಸಚಿವ ಜಮೀರ್ ಅಹಮದ್ ಖಾನ್ ಅವರು ಪೊಲೀಸರ ಮೇಲೆ ಒತ್ತಡ ಹಾಕಿರುವುದನ್ನು ವಿಪಕ್ಷ ನಾಯಕ ಆರ್.ಅಶೋಕ್ ಖಂಡಿಸಿದ್ದಾರೆ.
ಸಚಿವ ಸಂಪುಟ ಸದಸ್ಯರೇ ಹೀಗೆ ಕಾನೂನು ಬಾಹಿರವಾಗಿ ನಡೆದುಕೊಳ್ಳುವುದಾದರೆ ರಾಜ್ಯದಲ್ಲಿ ಸಂವಿಧಾನ, ಕಾನೂನು ನಿಯಮಗಳು ಇದ್ದು ಪ್ರಯೋಜನವೇನು?
ಸಿದ್ದರಾಮಯ್ಯನವರೇ, ಜಮೀರ್‌ಅವರನ್ನು ಸಂಪುಟದಲ್ಲಿ ಇರಿಸಿಕೊಂಡು ಯಾವ ಸಂದೇಶ ನೀಡುತ್ತಿದ್ದೀರಿ? ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

