ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಳೆದ 6 ವರ್ಷಗಳ ಹಿಂದೆ ಕೆಪಿಸಿಸಿಯನ್ನು ಮುನ್ನಡೆಸುವ ಮಹತ್ವದ ಜವಾಬ್ದಾರಿಯನ್ನು ನನಗೆ ವಹಿಸಲಾಯಿತು. ಅಂದಿನಿಂದ ಎದುರಿಸಿದ ಪ್ರತಿಯೊಂದು ಸವಾಲು ಮತ್ತು ಸಾಧಿಸಿದ ಪ್ರತಿಯೊಂದು ಗೆಲುವು,
ನಮ್ಮ ತಂಡದ ಹಾಗೂ ನಿಷ್ಠಾವಂತ ಕಾರ್ಯಕರ್ತರ ಪ್ರಯತ್ನವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ರಾಜ್ಯದ ಅಭಿವೃದ್ಧಿ, ಜನಸೇವೆ ಮತ್ತು ಪಕ್ಷದ ಬಲವರ್ಧನೆಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ. ನಿಮ್ಮೆಲ್ಲರ ಸಹಕಾರ ಮತ್ತು ಬೆಂಬಲ ಸದಾ ಹೀಗೆಯೇ ಮುಂದುವರಿಯಲಿ ಎಂದು ಡಿಸಿಎಂ ಕೋರಿದರು.

