ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಚಿಂತನೆ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹುಬ್ಬಳ್ಳಿ ಧಾರವಾಡದಲ್ಲಿ ವಿದ್ಯುತ್‌ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
ಮುಖ್ಯಾಂಶಗಳು
;

 ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಲಾಯಿತು.

ಯೋಜನೆ ಅನುಷ್ಠಾನ ಕುರಿತು ಮೂರು ತಿಂಗಳ ಒಳಗಾಗಿ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸೂಚಿಸಲಾಯಿತು.

ಇದು ಸಂಪೂರ್ಣ ವಿದ್ಯುತ್ ಚಾಲಿತ ವ್ಯವಸ್ಥೆಯಾಗಿದ್ದು, ನಗರದಲ್ಲಿ ಎತ್ತರಿಸಿದ ರಸ್ತೆ ಹಾಗೂ ಇತರೆಡೆ ನೆಲದ ಮೇಲೆ ಮೆಟ್ರೋ ಮಾದರಿಯ ವಾಹನ ಸಂಚರಿಸಲಿದೆ.

ಇದರಲ್ಲಿ 250 ಜನರು ಒಮ್ಮೆಗೆ ಪ್ರಯಾಣಿಸಬಹುದಾಗಿದೆ. ಕಳೆದ ಒಂದು ವರ್ಷದಿಂದ ಯೋಜನೆ ಕಾರ್ಯಸಾಧ್ಯತೆ ಬಗ್ಗೆ ಅಧ್ಯಯನ ನಡೆಸಲಾಗಿದೆ.  ಮೆಟ್ರೋ ಮಾದರಿಯ ಈ ಸಂಚಾರಿ ವ್ಯವಸ್ಥೆ ಯುರೋಪಿನ ಹಲವು ರಾಷ್ಟ್ರಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ರಾಜ್ಯದಲ್ಲಿಯೂ ಇದನ್ನು ಅನುಷ್ಠಾನಗೊಳಿಸುವ ಉದ್ದೇಶ ಸರ್ಕಾರದ್ದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹುಬ್ಬಳ್ಳಿ ಧಾರವಾಡದಲ್ಲಿ ಈ ಯೋಜನೆ ಯಶಸ್ವಿಯಾದರೆ, ರಾಜ್ಯದ ಇತರ ಎರಡನೇ ಹಂತದ ನಗರಗಳಿಗೂ ಇದನ್ನು ವಿಸ್ತರಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

Share This Article
error: Content is protected !!
";