ಸಿಎಂ-ಡಿಸಿಎಂಗೆ ನೀತಿ ಆಯೋಗದ ಸಭೆಗೆ ಹೋಗಲು ಪುರುಸೊತ್ತಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಎಂ ಸಿದ್ದರಾಮಯ್ಯ
ಹಾಗು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ವಿಪಕ್ಷ ನಾಯಕ ಆರ್.ಅಶೋಕ್ ಹಲವು ಪ್ರಶ್ನೆಗಳನ್ನು ಹಾಕಿದ್ದಾರೆ.

- Advertisement - 

ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡಲು ಸಮಯವಿದೆ. ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿ ಐಪಿಎಲ್ ಕ್ರಿಕೆಟ್ ಪಂದ್ಯ ವೀಕ್ಷಿಸಲು ಸಮಯವಿದೆ ಎಂದು ಅಶೋಕ್ ಅವರು ವಾಗ್ದಾಳಿ ಮಾಡಿದ್ದಾರೆ.

- Advertisement - 

ಕುರ್ಚಿಗೆ ಕಂಟಕ ಬಂದಾಗ ಹೈಕಮಾಂಡ್ ಮನೆಬಾಗಿಲು ತಟ್ಟಲು ದೆಹಲಿಗೆ ಹೋಗಲು ಸಮಯವಿದೆ. ಹುಟ್ಟುಹಬ್ಬಕ್ಕೆ ಕಬಿನಿಗೆ ಹೋಗಿ ಆನೆ, ಹುಲಿ ನೀಡಲು ಸಮಯವಿದೆ.

I.N.D.I ಮಿತ್ರ ಪಕ್ಷ ಡಿಎಂಕೆ ಕರೆದಾಗ ಚೆನ್ನೈಗೆ ಹೋಗಿ ರಾಜಕೀಯ ಮಾಡಲು ಸಮಯವಿದೆ. ಎಐಸಿಸಿ ಸಭೆಗೆ ರಾಜಸ್ಥಾನದ ಜೈಪುರಕ್ಕೆ ಹೋಗಲು ಸಮಯವಿದೆ ಎಂದು ಅಶೋಕ್ ಹರಿಹಾಯ್ದಿದ್ದಾರೆ.

- Advertisement - 

ಆದರೆ ರಾಜ್ಯದ, ದೇಶದ ಅಭಿವೃದ್ಧಿಗಾಗಿ, ಭವಿಷ್ಯಕ್ಕಾಗಿ ಪ್ರಧಾನಮಂತ್ರಿಗಳು, ದೇಶದ ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಚಿಂತನ ಮಂಥನ ನಡೆಸುವ ಅತ್ಯಂತ ಪ್ರಮುಖ ವೇದಿಕೆಯಾದ ನೀತಿ ಆಯೋಗದ ಸಭೆಗೆ ಹೋಗಲು, ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ಹೋಗಲು ಇಬ್ಬರಿಗೂ ಪುರುಸೊತ್ತಿಲ್ಲ, ಆಸಕ್ತಿಯೂ ಇಲ್ಲ ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ನಿಮ್ಮಂತಹವರಿಗೆಲ್ಲ ಯಾಕೆ ಸ್ವಾಮಿ ರಾಜಕಾರಣ, ಸಾರ್ವಜನಿಕ ಜೀವನ? ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ರಾಜಕಾರಣ ಅಂದರೆ ಮೋಜು, ಮಸ್ತಿ ಮಾಡುವ ಅಧಿಕಾರದ ಸುಪ್ಪತ್ತಿಗೆಯೇ ಹೊರತು ಜನಕಲ್ಯಾಣ ಅಥವಾ ಅಭಿವೃದ್ದಿಯ ಬಗ್ಗೆ ಆಸಕ್ತಿಯೂ ಇಲ್ಲ, ಬದ್ಧತೆಯೂ ಇಲ್ಲ ಎಂದು ವಿಪಕ್ಷ ನಾಯಕ ಅಶೋಕ್ ವಾಗ್ದಾಳಿ ಮಾಡಿದ್ದಾರೆ.

 

 

Share This Article
error: Content is protected !!
";