ಸಿಎಂ-ಡಿಸಿಎಂ ಬಣಗಳು ಸಕ್ರಿಯ ಅಡಕತ್ತರಿಯಲ್ಲಿ ಹೈಕಮಾಂಡ್‌

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಡಿಸಿಎಂ ಬಣಗಳು ಸಕ್ರಿಯವಾಗಿದ್ದು ಹೈಕಮಾಂಡ್‌ಗೆ ಅಡಕತ್ತರಿಯಲ್ಲಿ ಸಿಲುಕಿದೆ.
ಬೆಂಗಳೂರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಢೀರ್ ಬಂದಿದ್ದು
, ಬಣಗಳ ನಾಯಕರು ಖರ್ಗೆ ಭೇಟಿಯಾಗಿ ತಮ್ಮದೇ ದಾಳ ಉರುಳಿಸಿದ್ದಾರೆ. ಇದರ ನಡುವೆ ಬೆಂಗಳೂರಲ್ಲಿ ಸಿದ್ದರಾಮಯ್ಯ ಕೂಡಾ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಮಾತುಕತೆ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖರ್ಗೆ ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಪಕ್ಷ ಸಂಘಟನೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಚರ್ಚಿಸಿದ್ದೇವೆ. ಅಂತಿಮವಾಗಿ ಹೈಕಮಾಂಡ್‌ ಕೈಗೊಳ್ಳುವ ನಿರ್ಧಾರಕ್ಕೆ ನಾನು, ಡಿಸಿಎಂ ಸೇರಿ ಎಲ್ಲರೂ ಒಪ್ಪಬೇಕು ಎಂದು ತಿಳಿಸಿದ್ದಾರೆ.

- Advertisement - 

ಯಾವಾಗ ನನ್ನನ್ನು ಕರೆಯುತ್ತಾರೋ ಆಗ ನಾನು ದೆಹಲಿಗೆ ಹೋಗುತ್ತೇನೆ. ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರೂ ಅದರಂತೆ ನಡೆದುಕೊಳ್ಳುವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ನಾನು ಒಂದೂವರೆ ಗಂಟೆ ಚರ್ಚೆ ಮಾಡಿದ್ದೇವೆ. ಇದೊಂದು ಸೌಹಾರ್ದ ಭೇಟಿ. ನಾನು ಡಲ್ ಆಗಲ್ಲ, ನಾನು ಯಾವಾಗಲೂ ಡಲ್ ಆಗುವ ಪ್ರಶ್ನೆಯೇ ಇಲ್ಲ. ನಾನು ಅತಿಯಾಗಿ ಖುಷಿಯಾಗಿಯೂ ಇರಲ್ಲ ಎಂದು ಸಿಎಂ ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";