ಸಿಎಂ-ಡಿಸಿಎಂ ಸಂಧಾನ ಯಶಸ್ವಿ, ಶಿಗ್ಗಾಂವ್ ಬಂಡಾಯ ಶಮನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾವೇರಿ ಜಿಲ್ಲೆಯ ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಅಜ್ಜಂಪೀರ್ ಖಾದ್ರಿ ಅವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ,

- Advertisement - 

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಡೆಸಿದ ಪ್ರತ್ಯೇಕ ಸಂಧಾನ ಮಾತುಕತೆ ನಡೆಸಿದರು. ಪಕ್ಷದ ಹಿತದೃಷ್ಟಿಯಿಂದ ನಾಮಪತ್ರ ಹಿಂಪಡೆಯುವಂತೆ ಇಬ್ಬರು ನಾಯಕರು ಬಂಡಾಯ ಅಭ್ಯರ್ಥಿಗೆ ಸೂಚನೆ ನೀಡಿದರು.

- Advertisement - 

ಈ ವೇಳೆ ಅಜ್ಜಂಪೀರ್ ಖಾದ್ರಿ ಅವರು ತಮ್ಮ ನಾಮಪತ್ರ ಹಿಂಪಡೆಯುವ ಜೊತೆಗೆ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಕ್ರಿಯವಾಗಿ ಕೆಲಸ ಮಾಡುವುದಾಗಿ ವಾಗ್ದಾನ ನೀಡಿದ್ದಾರೆ ಎಂದು ಸಿಎಂ, ಡಿಸಿಎಂ ಟ್ವೀಟ್ ಮಾಡಿ ತಿಳಿಸಿದ್ದಾರೆ.

- Advertisement - 

 

 

 

Share This Article
error: Content is protected !!
";