ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಲ್ತುಳಿತ ದುರಂತದಲ್ಲಿ 11 ಅಮಾಯಕರ ಸಾವಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ಕಾರಣ ಎಂಬುದು ಜಗಜ್ಜಾಹೀರಾಗಿರುವ ಸತ್ಯ. ಈ ಅನಾಹುತದ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ ಮೊದಲು ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಆಗ್ರಹ ಮಾಡಿದೆ.
ಸರ್ಕಾರ ಪರಿಹಾರ ರೂಪದಲ್ಲಿ ಎಷ್ಟೇ ಲಕ್ಷ ಕೊಟ್ಟರು ಹೋದ ಜೀವಗಳು ಮರಳಿ ಬರುವುದಿಲ್ಲ. ಮೃತರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ, ಮೃತರ ಕುಟುಂಬದವರಿಗೆ ನ್ಯಾಯ ಸಿಗಬೇಕಾದರೆ ಘಟನೆ ನೈತಿಕ ಹೊಣೆ ಹೊತ್ತು “ಕೊಲೆಗಾರ ಸರ್ಕಾರದ ಸಿಎಂ ಮತ್ತು ಡಿಸಿಎಂ” ಇಬ್ಬರೂ ಮೊದಲು ರಾಜೀನಾಮೆ ಕೊಡಬೇಕು ಎಂದು ಜೆಡಿಎಸ್ ಆಗ್ರಹ ಮಾಡಿದೆ.
ನಿಮ್ಮ ನಿರ್ಲಕ್ಷದಿಂದ ಸಂಭವಿಸಿದ ದುರಂತಕ್ಕೆ ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿ, ನೀವು ಅಧಿಕಾರದಲ್ಲಿ ಮುಂದುವರಿಯುವುದು ರಾಜ್ಯದ ಜನರಿಗೆ ಮಾಡುತ್ತಿರುವ ದ್ರೋಹ. ಸಿಎಂ, ಡಿಸಿಎಂ ರಾಜೀನಾಮೆಯೊಂದೇ ನಿಮ್ಮ ತಪ್ಪಿಗೆ ಪ್ರಾಯಶ್ಚಿತ್ತ ಎಂದು ಜೆಡಿಎಸ್ ತಿಳಿಸಿದೆ.