ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ-ಡಿಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಳೆದ ಮೂರ್ನಾಲ್ಕು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟು ಅವಾಂತರ ಸೃಷ್ಠಿಯಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಳೆ ಹಾನಿ ಪ್ರದೇಶಗಳಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.‌

- Advertisement - 

ಬೆಂಗಳೂರಿನ ಸಾಯಿ ಲೇಔಟ್ ನಿವಾಸಿಗಳು ಸಿಎಂ, ಡಿಸಿಎಂ ಇಬ್ಬರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

- Advertisement - 

ಮೊದಲಿಗೆ ಮಾನ್ಯತಾ ಟೆಕ್ ಪಾರ್ಕ್ ಬಳಿಯ ವೀರಣ್ಣನ ಪಾಳ್ಯಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು, ರಾಜಕಾಲುವೆ ಒತ್ತುವರಿ ತೆರವಿಗೆ ಖಡಕ್ ಸೂಚನೆ ನೀಡಿದರು.‌

ರಾಜಕಾಲುವೆ ಹೂಳೆತ್ತುವ ಕಾಮಗಾರಿ ವೀಕ್ಷಿಸಿದ ಸಿಎಂ, ಡಿಸಿಎಂ ಮುಲಾಜಿಲ್ಲದೆ ಒತ್ತುವರಿ ತೆರವು ಮಾಡಿ ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಮಾನ್ಯತಾ ಟೆಕ್
, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್​ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು.
ಈ ವೇಳೆ ನೋಟಿಸ್ ಕೊಟ್ಟಿಲ್ಲವೇ
, ಒತ್ತುವರಿ ಆಗಿರುವುದನ್ನು ನೋಡಿಕೊಂಡು‌ಕುಳಿತಿದ್ದೀರಾ ಎಂದು ಸಿಎಂ ಖಾರವಾಗಿ ಅಧಿಕಾರಿಗಳನ್ನು ಪ್ರಶ್ನಿಸಿದರು.
ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜಿಲ್ಲದೆ
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು.

- Advertisement - 

ಬಳಿಕ ಸಿಎಂ ಸಿದ್ದರಾಮಯ್ಯ ಹೆಚ್ ಬಿಆರ್ ಲೇಔಟ್ 5ನೇ ಬ್ಲಾಕ್​ಗೆ ಭೇಟಿ ನೀಡಿ ತುಂಬಿ ಹರಿಯುತ್ತಿರುವ ರಾಜಕಾಲುವೆ ಪ್ರದೇಶ ವೀಕ್ಷಿಸಿದರು. ಸಚಿವ ಕೆ.ಜೆ.ಜಾರ್ಜ್ ಸಮಸ್ಯೆ ಬಗ್ಗೆ ಸಿಎಂ ಹಾಗೂ ಡಿಸಿಎಂಗೆ ಮಾಹಿತಿ ನೀಡಿದರು. ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿಪಡಿಸಲು, ವಿಸ್ತರಿಸಲು ಸೂಚನೆ ನೀಡಿದರು.
ಬಾಧಿತ ಪ್ರದೇಶಗಳಲ್ಲಿ ಬೇಸ್​ಮೆಂಟ್​ ಪಾರ್ಕಿಂಗ್
, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ ನಗರ ಯೋಜನೆಯಲ್ಲಿ ಬದಲಾವಣೆ ತರುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.

ವಡ್ಡರಪಾಳ್ಯ ಲೇಔಟ್, ಗೆದ್ದಲಹಳ್ಳಿಯಲ್ಲಿ ಪರಿಶೀಲನೆ: ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ವಡ್ಡರಪಾಳ್ಯ ಬಡಾವಣೆಗೆ ಭೇಟಿ ನೀಡಿ ರಾಜಕಾಲುವೆ ವೀಕ್ಷಣೆ ಮಾಡಿದರು. ರಾಜಕಾಲುವೆ ವಿಸ್ತೀರ್ಣ 29 ಮೀಟರ್ ಆಗಿದ್ದು, ಬೆಂಗಳೂರಿನ ಅತಿ ದೊಡ್ಡ ರಾಜಕಾಲುವೆಯಾಗಿದೆ.
ಆದರೆ ಗೆದ್ದಲಹಳ್ಳಿಯ ಕಾಲುವೆ ಬಾಟಲ್ ನೆಕ್ ಇದ್ದು
, ಕೇವಲ 8 ಮೀಟರ್ ಇದೆ. ಆದ್ದರಿಂದ ಮೇಲಿನಿಂದ ರಾಜಕಾಲುವೆಯಲ್ಲಿ ಹರಿದು ಬರುವ ನೀ+ರು ಈ ಬಾಟಲ್ ನೆಕ್​ನಲ್ಲಿ ತುಂಬಿ ಹರಿದು ಸಾಯಿ ಲೇಔಟ್​ಗೆ ನುಗ್ಗುತ್ತದೆ ಎಂದು ಅಧಿಕಾರಿಗಳು ವಿವರಿಸಿದರು.

ಆದ್ದರಿಂದ 8 ಮೀಟರ್ ಬಾಟಲ್ ನೆಕ್ ಇರುವ ರೈಲ್ವೇ ವೆಂಟ್​ಅನ್ನು ವಿಸ್ತರಿಸಲು ಸೂಚನೆ ನೀಡಲಾಯಿತು. ನಿನ್ನೆ ದಿನ ರೈಲ್ವೇಯವರು ಈ ವೆಂಟ್ ವಿಸ್ತರಣೆಗೆ ಬಿಡಿಎಗೆ ಅನುಮತಿ ನೀಡಿದ್ದಾರೆ. ಜೊತೆಗೆ ಕಾಲುವೆ ನಿರ್ವಹಣೆ ಮಾಡದ ಗುತ್ತಿಗೆದಾರರಿಂದ ವಿವರಣೆ ಕೇಳುವಂತೆ ಸೂಚಿಸಲಾಯಿತು.

ಸಾಯಿ ಲೇಔಟ್​ಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ ಸಿಎಂ: ಬಳಿಕ ಸಿಎಂ ಸಿದ್ದರಾಮಯ್ಯ ಅವರು ಮಳೆ ಹಾನಿ ಪ್ರದೇಶವಾದ ಸಾಯಿ ಲೇಔಟ್​ಗೆ ಭೇಟಿ ನೀಡಿ ಸಮಸ್ಯೆ ಬಗ್ಗೆ ವಿವರಣೆ ಪಡೆದರು. ಮಳೆ ಮತ್ತು ಪ್ರವಾಹ ಪೀಡಿತ ಸ್ಥಳ ವೀಕ್ಷಿಸಿದ ಸಿಎಂ, ಸಾಯಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರಿಂಸ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು. ಬಳಿಕ‌ಮನವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗಂಭೀರ ಗಮನ ಹರಿಸಿ ತಕ್ಷಣಕ್ಕೆ ಸಾಧ್ಯವಿರುವ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಮಳೆಯಿಂದ ತೊಂದರೆಯಾದ ಮನೆಗಳಿಗೆ ಭೇಟಿ ನೀಡಿ. ದೂರದಿಂದ ನೋಡಿದ್ರೆ ಏನು ಗೊತ್ತಾಗುತ್ತೆ ಎಂದು ಸಿಎಂಗೆ ಸ್ಥಳೀಯ ಮಹಿಳೆಯರು ಒತ್ತಾಯಿಸಿದರು. ಬಿಬಿಎಂಪಿ ಅಧಿಕಾರಿಗಳು ಸಾರ್ವಜನಿಕರನ್ನು ಸಮಾಧಾನ ಪಡಸಲು ಯತ್ನಿಸಿದರು. ಇವರು ಕಷ್ಟ ಸುಖ ಕೇಳಲು ಬಂದಿಲ್ಲ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. ಗೊಂದಲದ ವಾತಾವರಣ ಹಿನ್ನಲೆ, ಸಾರ್ವಜನಿಕ ಮನವಿ ಆಲಿಸಿ ತೆರಳಿದ ಸಿಎಂ, ಡಿಸಿಎಂ, ಸ್ಥಳೀಯರ ಆಕ್ರೋಶ ಹೆಚ್ಚಾಗಿದ್ದರಿಂದ ಮಳೆ ಹಾನಿ ಪ್ರದೇಶಗಳಿಂದ ತೆರಳಿದ ಪ್ರಸಂಗ ಜರುಗಿತು‌.

 

 

Share This Article
error: Content is protected !!
";