ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶೇ.40ರಷ್ಟು ಸರ್ಕಾರ ಎಂಬ ಹಸಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಕರ್ನಾಟಕ ಕಾಂಗ್ರೆಸ್ ಪಕ್ಷ ಈಗ ಜವಾಬ್ದಾರಿಯುತ ವಿಪಕ್ಷವಾಗಿ ಸರ್ಕಾರದ ಭ್ರಷ್ಟಾಚಾರ, ವೈಫಲ್ಯಗಳ ಬಗ್ಗೆ ದನಿ ಎತ್ತುತ್ತಿರುವ ಕರ್ನಾಟಕ ಬಿಜೆಪಿ ಪಕ್ಷದ ಮೇಲೆ ಸುಳ್ಳು ಕೇಸು ದಾಖಲಿಸುವ ಮೂಲಕ ವಿಪಕ್ಷಗಳ ದನಿ ಅಡಗಿಸುವ ಪ್ರಯತ್ನ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹರಿಹಾಯ್ದಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ, ನಿಮ್ಮ ಗೊಡ್ಡು ಬೆದರಿಕೆಗಳಿಗೆ, ನಟ್ಟು-ಬೋಲ್ಟು ಟೈಟು ಮಾಡುವ ಧಮ್ಕಿಗಳಿಗೆ ನಾವು ಜಗ್ಗುವುದು ಇಲ್ಲ, ಬಗ್ಗುವುದೂ ಇಲ್ಲ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ವೈಫಲ್ಯ, ಎಡವಟ್ಟುಗಳನ್ನು ಜನರಿಗೆ ತಲುಪಿಸುವ ನಮ್ಮ ಸಾಂವಿಧಾನಿಕ ದತ್ತ ಕರ್ತವ್ಯ ಎಗ್ಗಿಲ್ಲದೆ ಮುಂದುವರೆಯಲಿದೆ ಎಂದು ಅಶೋಕ್ ಸವಾಲ್ ಹಾಕಿದ್ದಾರೆ.