ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನವೆಂಬರ್ 18-20ರ ವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿತ್-2025ರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100ಕ್ಕೂ ಹೆಚ್ಚು ಕಂಪನಿಗಳ CEO ಗಳ ಜೊತೆ ಉಪಹಾರ ಕೂಟದಲ್ಲಿ ಪಾಲ್ಗೊಂಡರು.
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
“Futurise” “ಭವಿಷ್ಯೋದಯ” ಧ್ಯೇಯವಾಕ್ಯದೊಂದಿಗೆ 2025ರ ಬೆಂಗಳೂರು ಟೆಕ್ ಸಮ್ಮಿತ್ ಸಂಯೋಜಿಸಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.

