ಅನಧಿಕೃತ ಬಡಾವಣೆಗಳಿಗೆ ಅವಕಾಶ ನೀಡುವುದಿಲ್ಲ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳಿಗೆ ಕಿಂಚಿತ್ತೂ ಅವಕಾಶ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ ತಿಳಿಸಿದ್ದಾರೆ.

- Advertisement - 

ಕಾವೇರಿ ನಿವಾಸದಲ್ಲಿ ಮಂಗಳವಾರ ರಾಜ್ಯದ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡುವ ಕುರಿತು ಜಿಲ್ಲಾಧಿಕಾರಿಗಳು, ಯೋಜನಾ ನಿರ್ದೇಶಕರು, ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪೌರಾಯುಕ್ತರು ಹಾಗು ಮುಖ್ಯಾಧಿಕಾರಿಗಳೊಂದಿಗೆ ಅವರು ವಿಡಿಯೋ ಕಾನ್ಫರೆನ್ಸ್ ನಡೆಸಿದರು.

- Advertisement - 

ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ನಾವು ಅಂತ್ಯ ಹಾಡುತ್ತಿದ್ದೇವೆ. ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

ಅನಧಿಕೃತ ಬಡಾವಣೆಗಳಿಗೆ ಕಾಯ್ದೆ ಮೂಲಕ ಅಂತ್ಯ ಹಾಡಿದ್ದೇವೆ. ಅಧಿಕಾರಿಗಳು ಇದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು. ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ. ಪರಿಣಾಮ‌ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ, ಸ್ಥಳೀಯ ಸಂಸ್ಥೆಗಳಿಗೆ ಆದಾಯವೂ ಬಂದ್ ಆಗಿದೆ. ಇವೆಲ್ಲಾ ಅನಾನುಕೂಲಗಳಿಗೂ ಅಂತ್ಯ ಹಾಡಬೇಕಿದೆ. ಕಂದಾಯ ಕಟ್ಟದಿರುವುದರಿಂದ ಇಷ್ಟೆಲ್ಲಾ ಸಮಸ್ಯೆಗಳಾಗಿವೆ. ಇದೊಂದು ಬಾರಿ ಬಿ ಖಾತಾ ಕೊಟ್ಟು ಅಂತ್ಯ ಹಾಡ್ತೀವಿ ಎಂದು ಅವರು ತಿಳಿಸಿದರು.

- Advertisement - 

3 ತಿಂಗಳು ಮಾತ್ರ ಟೈಮ್ ಕೊಟ್ಟಿದ್ದೇವೆ. ಅಷ್ಟರೊಳಗೆ ಅಭಿಯಾನ ನಡೆಸಿ ಪೂರ್ಣಗೊಳಿಸಿ. ಯಾವುದೇ ರಾಜಿ ಇಲ್ಲ. ಅಧಿಕಾರಿಗಳು ರಾಜಿ ಮಾಡಿಕೊಂಡರೆ ಸಹಿಸಲ್ಲ. ಅನಧಿಕೃತ ಬಡಾವಣೆಗಳು ಮತ್ತೆ ತಲೆ ಎತ್ತಿದರೆ ಜಿಲ್ಲಾಧಿಕಾರಿ, ಮುಖ್ಯ ಅಧಿಕಾರಿ, ನಗರ ಯೋಜನಾ ಅಧಿಕಾರಿಗಳು ಜವಾಬ್ದಾರಿ ಆಗ್ತೀರಿ. ನಿಮ್ಮ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ. ಮಧ್ಯವರ್ತಿಗಳಿಗೆ, ಬ್ರೋಕರ್​​ಗಳಿಗೆ ತಕ್ಷಣ ಗೇಟ್ ಪಾಸ್ ಕೊಡಿ. ಇದನ್ನು ಮತ್ತು ಕಾಯ್ದೆಯ ದೂರದೃಷ್ಟಿಯನ್ನು ನೀವೆಲ್ಲರೂ ಸ್ಪಷ್ಟವಾಗಿ, ಖಚಿತವಾಗಿ ಅರ್ಥ ಮಾಡಿಕೊಳ್ಳಿ ಎಂದು ಸೂಚಿಸಿದರು.

ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳು, ರೆವಿನ್ಯೂ ಬಡಾವಣೆಗಳು ತಲೆ ಎತ್ತಬಾರದು. ಅನಧಿಕೃತ , ರೆವಿನ್ಯೂ ಬಡಾವಣೆಗಳಲ್ಲಿ ಸೈಟು, ಮನೆ ಕಟ್ಟಿರುವವರಿಗೆ ತೊಂದರೆ ಆಗಬಾರದು. ಒಟ್ಟಾರೆಯಾಗಿ ಬಡವರು, ಮಧ್ಯಮ ವರ್ಗದವರಿಗೆ ಅನುಕೂಲ ಮಾಡಿಕೊಡಲು ಒಂದು ಟೈಂ ಅವಕಾಶ ಕೊಟ್ಟಿದ್ದೇವೆ. 3 ತಿಂಗಳಲ್ಲಿ ಎಲ್ಲರಿಗೂ ಖಾತಾ ನೀಡಿ ಅಂತ್ಯ ಹಾಡಿ. ನಾನು ಮತ್ತು ಸಂಬಂಧಪಟ್ಟ ಎಲ್ಲಾ ಸಚಿವರೂ ಸ್ಪಷ್ಟಪಡಿಸಿದ್ದೇವೆ. ಹೊಸ ಗೊಂದಲಗಳಿಗೆ ಅವಕಾಶ ಮಾಡಿಕೊಡಬೇಡಿ. ಬಿ ಖಾತಾ ಇವತ್ತಿನಿಂದಲೇ ಕೊಡಲು ಶುರು ಮಾಡಿ ಎಂದು ಸೂಚನೆ ನೀಡಿದರು.

 

Share This Article
error: Content is protected !!
";