ಮುಷ್ಕರ ನಿರತ ಲಾರಿ ಮಾಲೀಕರೊಂದಿಗೆ ಸಭೆ ನಡೆಸಿದ ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿಯಲ್ಲಿ ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು:

ಈ ಬಾರಿ ಬಜೆಟ್‌ನಲ್ಲಿ ಡೀಸೆಲ್ ಮೇಲಿನ ಸುಂಕ ರೂ.2  ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡೀಸೆಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡುತ್ತೇನೆ.

ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಸರ್ಕಾರ ಬಡವರ ಪರವಾಗಿದ್ದು ಸರ್ಕಾರದೊಂದಿಗೆ ಲಾರಿ ಮಾಲೀಕರು ಸಹಕರಿಸಬೇಕು. ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಪ್ರತಿ ವರ್ಷ ಸುಮಾರು 14 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ. 83 ಸಾವಿರ ಕೋಟಿ ರೂ. ಈ ವರ್ಷ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಲಾಗಿದೆ.

ಸಂಚಾರಿ ದಟ್ಟಣೆ ಅವಧಿಯಲ್ಲಿ ನಗರದ ಒಳಗೆ ಲಾರಿಗಳು ಪ್ರವೇಶಿಸುವುದರ ಬಗ್ಗೆ ಇರುವ ನಿರ್ಬಂಧ ತೆರವು ಸೇರಿದಂತೆ ಇತರ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈ ಕುರಿತಾಗಿ ಇನ್ನೊಮ್ಮೆ ಲಾರಿ ಮಾಲೀಕರ ಸಂಘದೊಂದಿಗೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

 

 

 

Share This Article
error: Content is protected !!
";